ಪಾರದರ್ಶಕ ಬೆಳೆ ವಿಮೆ ಪರಿಹಾರಕ್ಕೆ ಸರ್ಕಾರ ಚಿಂತನೆ: ಸಚಿವ ಸಂತೋಷ ಲಾಡ್

ಕೆಲ ಪ್ರದೇಶಗಳಲ್ಲಿ ಒಂದೇ ತೆರನಾದ ಬೆಳೆ ಬೆಳೆಯುವಂತೆ ಹಾಗೂ ವಿಮೆ ಮಾಡಿಸುವಂತೆ ಕೆಲ ವ್ಯಕ್ತಿಗಳು ವಿಮಾ ಕಂಪನಿಗಳ ಜೊತೆಗೂಡಿ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ರೈತರು ಸಚಿವರ ಗಮನಕ್ಕೆ ತಂದರು. ಇಂಥವರ ಬಗ್ಗೆ ತೀವ್ರ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

Written by - Manjunath N | Last Updated : Sep 12, 2024, 09:33 PM IST
  • ಕಟಾವು ಮಾದರಿಗಳನ್ನು ಎರಡು ಮೂರು ಪಟ್ಟು ಹೆಚ್ಚಿಸುವಲ್ಲಿ ಕ್ರಮಕೈಗೊಳ್ಳಲು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದೆಂದರು.
  • ಲಾಭದ ದೃಷ್ಟಿಯಿಂದ ಅಸ್ತಿತ್ವದಲ್ಲಿರುವ ವಿಮಾ ಕಂಪನಿಗಳು ರೈತರ ಹಿತದೃಷ್ಟಿ ಕಾಯದೇ ಕೇವಲ ಲಾಭದತ್ತ ಕಾರ್ಯ ನಿರ್ವಹಿಸುತ್ತವೆ.
 ಪಾರದರ್ಶಕ ಬೆಳೆ ವಿಮೆ ಪರಿಹಾರಕ್ಕೆ ಸರ್ಕಾರ ಚಿಂತನೆ: ಸಚಿವ ಸಂತೋಷ ಲಾಡ್ title=
Photo: Dipr Dharwad

ಧಾರವಾಡ: ಪ್ರಸಕ್ತ 2024 ನೇ ಸಾಲಿನ ಬೆಳೆ ವಿಮೆ ಕುರಿತಂತೆ ಜಿಲ್ಲೆಯ ವಿವಿಧ ಭಾಗಗಳ ರೈತ ಮುಖಂಡರ ಜೊತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿಂದು ಸಭೆ ಜರುಗಿತು.

ಬೆಳೆ ಕಟಾವು, ಬೆಳೆ ಹಾನಿ, ವಿಮಾ ಕಂಪನಿಗಳ ಅವೈಜ್ಞಾನಿಕ ಪದ್ಧತಿ, ಪರಿಹಾರ ವ್ಯತ್ಯಾಸ ಕುರಿತಂತೆ ಹಲವು ರೈತ ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಚಿವ ಸಂತೋಷ ಲಾಡ್ ಅವರು ಮಾತನಾಡಿ, ಬೆಳೆ ಕಟಾವು ಮಾದರಿಗಳನ್ನು ಎರಡು ಮೂರು ಪಟ್ಟು ಹೆಚ್ಚಿಸುವಲ್ಲಿ ಕ್ರಮಕೈಗೊಳ್ಳಲು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದೆಂದರು.

ಲಾಭದ ದೃಷ್ಟಿಯಿಂದ ಅಸ್ತಿತ್ವದಲ್ಲಿರುವ ವಿಮಾ ಕಂಪನಿಗಳು ರೈತರ ಹಿತದೃಷ್ಟಿ ಕಾಯದೇ ಕೇವಲ ಲಾಭದತ್ತ ಕಾರ್ಯ ನಿರ್ವಹಿಸುತ್ತವೆ. ಈ ಹಿನ್ನಲೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ವಿಮಾ ಕಂಪನಿಗಳಲ್ಲಿ ಬದಲಾವಣೆ ಬರಬೇಕಿದೆ. ರೈತರು ಸಹ ಇದಕ್ಕೆ ಪೂರಕವಾಗಿ ಒತ್ತಾಯ ಹಾಕಬೇಕೆಂದರು. ರಾಜ್ಯ ಹಾಗೂ ಕೇಂದ್ರ ಸರಕಾರಗಳೇ ವಿಮಾ ಕಂಪನಿಯನ್ನು ಆರಂಭಿಸಿ ಪಾರದರ್ಶಕ ಸಹಕಾರಿ ಸೊಸೈಟಿ ಮಾದರಿಯಲ್ಲಿ ವಿಮಾ ಸೊಸೈಟಿ ಆರಂಭಿಸಿ ಪರಿಹಾರ ಅನುಷ್ಠಾನಗೊಳಿಸವಲ್ಲಿ ಚರ್ಚೆ ನಡೆಯಬೇಕಿದೆಯೆಂದರು.May be an image of 7 people and text

ಇದನ್ನೂ ಓದಿ- ಸಿದ್ಧು ಸರ್ಕಾರದ ವಿರುದ್ಧ ಸಿ.ಟಿ.ರವಿ ಹೊಸ ಬಾಂಬ್: ದೀಪಾವಳಿಯೊಳಗೆ ಸರ್ಕಾರ ಡಮಾರ್..!

ಬೆಳೆಹಾನಿಯಾದಲ್ಲಿ ಸರಕಾರಿ ವಿಮಾ ಕಂಪನಿಗಳಿಂದಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದರೆಡು ದಿನಗಳಲ್ಲಿ ಅನುಭವಿ ಪರಿಣಿತ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದೆಂದು ಸಚಿವರು ತಿಳಿಸಿದರು.

ಕೆಲ ಪ್ರದೇಶಗಳಲ್ಲಿ ಒಂದೇ ತೆರನಾದ ಬೆಳೆ ಬೆಳೆಯುವಂತೆ ಹಾಗೂ ವಿಮೆ ಮಾಡಿಸುವಂತೆ ಕೆಲ ವ್ಯಕ್ತಿಗಳು ವಿಮಾ ಕಂಪನಿಗಳ ಜೊತೆಗೂಡಿ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ರೈತರು ಸಚಿವರ ಗಮನಕ್ಕೆ ತಂದರು. ಇಂಥವರ ಬಗ್ಗೆ ತೀವ್ರ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ಸಭೆಯಲ್ಲಿ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಂಟಿ ಕೃಷಿ ನಿರ್ದೇಶಕ ಮಂಜುನಾಥ ವೇದಿಕೆಯಲ್ಲಿ ಇದ್ದರು. ಸಭೆಯಲ್ಲಿ ಜಿಲ್ಲೆಯ ಹಲವಾರು ರೈತ ಮುಖಂಡರು ಅಭಿಪ್ರಾಯ ಹಂಚಿಕೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News