ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್‌ ದರೋಡೆ, ಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್‌ ಹೇಗೆ ಭಿನ್ನವಾಗುತ್ತದೆ? ಕಾಂಗ್ರೆಸ್‌ ಶಾಸಕರು ಕೂಡ ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಕಟೌಟ್‌ಗಳ ವಿಜೃಂಭಣೆ ಅಲ್ಲಿ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ ಎಂದರು.

Written by - Prashobh Devanahalli | Last Updated : Jan 21, 2025, 06:37 PM IST
    • 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ
    • ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ
    • ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕೆ
ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ title=
File Photo

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್‌ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿಯಾಗಲೀ, ರಾಹುಲ್‌ ಗಾಂಧಿಯಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ. ಇದು 60 ಪರ್ಸೆಂಟ್‌ ವಸೂಲಿ ಮಾಡುವ ನೆನಪಿನ ಜಾತ್ರೆಯೇ ಹೊರತು ಸಮಾವೇಶವಲ್ಲ ಎಂದರು.

ಇದನ್ನೂ ಓದಿ: ಬಿಗ್‌ ಬಾಸ್‌ ವಿನ್ನರ್‌ ಎಂದೇ ಕರೆಸಿಕೊಳ್ಳುತ್ತಿರುವ ತ್ರಿವಿಕ್ರಮ್‌ ಒಂದು ವಾರಕ್ಕೆ ಪಡೆಯುವ ಸಂಭಾವನೆ ಎಷ್ಟು ಲಕ್ಷ ಗೊತ್ತಾ?

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್‌ ದರೋಡೆ, ಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್‌ ಹೇಗೆ ಭಿನ್ನವಾಗುತ್ತದೆ? ಕಾಂಗ್ರೆಸ್‌ ಶಾಸಕರು ಕೂಡ ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಕಟೌಟ್‌ಗಳ ವಿಜೃಂಭಣೆ ಅಲ್ಲಿ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಕರ್ನಾಟಕದ ವೀರ ಮಹಿಳೆ. ಅವರನ್ನು ಪ್ರಿಯಾಂಕಾ ವಾದ್ರಾಗೆ ಹೋಲಿಕೆ ಮಾಡುವುದು ಅಕ್ಷಮ್ಯ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೂಡಲೇ ಜನರ ಕ್ಷಮೆ ಯಾಚಿಸಬೇಕು. ಇದರಿಂದ ಚೆನ್ನಮ್ಮಳಿಗೆ ಅಪಮಾನವಾಗಿದೆ. ಕಾಂಗ್ರೆಸ್‌ ಪಕ್ಷ ಕೂಡ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಒಟ್ಟೊಟ್ಟಿಗೆ ನಡೆಯಲಿದೆ ಶನಿ ಸಂಕ್ರಮಣ, ಸೂರ್ಯ ಗ್ರಹಣ !ಈ ರಾಶಿಯವರ ಮೇಲಾಗುವುದು ಹಣದ ಮಳೆ !ಹರಿದು ಬರುವುದು ಸಿರಿ ಸಂಪತ್ತು

ಬಿಜೆಪಿ ಸಂಘಟನಾ ಸಭೆ ನಡೆದಿದ್ದು, ತಾಲೂಕು ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಬಂದ ನಂತರ ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ನಾವ್ಯಾರೂ ತೀರ್ಮಾನ ಮಾಡುವುದಿಲ್ಲ. ಅದನ್ನು ಹಿರಿಯ ನಾಯಕರು ಮಾತ್ರ ಮಾಡುತ್ತಾರೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೇ ವರಿಷ್ಠರ ಜೊತೆ ಮಾತನಾಡಲಿದ್ದಾರೆ ಎಂದರು

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News