ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah : ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  

Written by - Prashobh Devanahalli | Edited by - Savita M B | Last Updated : Jul 22, 2023, 02:58 PM IST
  • ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ
  • ವಿರೋಧಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ
  • ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು
ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು, ಜುಲೈ 22 : ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ. 

ವಿರೋಧಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು.ಅವರು ನಡವಳಿಕೆ ಸರಿಯಿರದಿದ್ದ ಕಾರಣ , ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ.  ಸಭಾಧ್ಯಕ್ಷರ ಕ್ರಮಕ್ಕೂ , ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ-ಟೊಮೊಟೊ ತುಂಬಿದ್ದ ಗೂಡ್ಸ್ ವಾಹನ‌ ಕಳ್ಳತನ: ಖತರ್ನಾಕ್ ಗಂಡ-ಹೆಂಡತಿ ಅಂದರ್

ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂಬುದು ಸುಳ್ಳು :
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ್ಸ್ವಾಮಿಯವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು, ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ , ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜಿನಾಮೆ ನೀಡಿದರೆ ? ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.

ಇದನ್ನೂ ಓದಿ-ಕುಗ್ಗಿದ ಬಿಜೆಪಿ ಉತ್ಸಾಹ: ಪ್ರತಿಭಟನೆಗೆ ಬಾರದ ಬೆಂಗಳೂರು ಶಾಸಕರು

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News