Invest Karnataka: ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಿಂದ ಸಾವಿರಾರು ಉದ್ಯೋಗ ಸೃಷ್ಟಿ

2022ರ ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ  ರಾಜ್ಯದ ಆರ್ಥಿಕ ಚಿತ್ರಣವನ್ನೇ ಬದಲಿಸುವ ಶಕ್ತಿ ಹೊಂದಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

Written by - Yashaswini V | Last Updated : Oct 12, 2022, 09:07 AM IST
  • ಮುಂಬರುವ ನವೆಂಬರ್ 2, 3 ಮತ್ತು 4 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ
  • ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 2022ರಲ್ಲಿ 5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯ ನಿರೀಕ್ಷೆ
  • ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಿಂದ ಸಾವಿರಾರು ಉದ್ಯೋಗ ಸೃಷ್ಟಿ - ಸಚಿವ ಮುರುಗೇಶ್ ಆರ್ ನಿರಾಣಿ
Invest Karnataka: ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಿಂದ ಸಾವಿರಾರು ಉದ್ಯೋಗ ಸೃಷ್ಟಿ  title=
Invest Karnataka

ನವದೆಹಲಿ:  ಮುಂಬರುವ ನವೆಂಬರ್ 2, 3 ಮತ್ತು 4 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿಂದು  ವಿವಿಧ ಕೈಗಾರಿಕೋದ್ಯಮಿಗಳು ಹಾಗೂ ಸಂಸ್ಥೆಗಳ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಭಾಗವಹಿಸಿದ್ದರು.

ಇನ್ನು ಈ ವೇಳೆ ಮಾತನಾಡಿದ ಸಚಿವ ಡಾ. ಮುರುಗೇಶ್  ಆರ್ ನಿರಾಣಿಯವರು, ಈ ಕಾರ್ಯಕ್ರಮವು ಮುಂದಿನ ದಿನಗಳಲ್ಲಿ ರಾಜ್ಯದ ಆರ್ಥಿಕ ಚಿತ್ರಣವನ್ನೇ ಬದಲಿಸುವ ಶಕ್ತಿ ಹೊಂದಿದ್ದು, ಸಾವಿರಾರು ಉದ್ಯೋಗ ಸೃಷ್ಟಿಗೆ ಕಾರಣವಾಗಲಿದೆ ಎಂದರು.

ಇದನ್ನೂ ಓದಿ- Basavaraja Bommai : 'ಬಿಜೆಪಿ ಪರವಾದ ಉತ್ಸಾಹ ; 2023 ರಲ್ಲಿ ನಾವೇ ಅಧಿಕಾರಕ್ಕೆ'

ಈ ಕಾರ್ಯಕ್ರಮದಲ್ಲಿ ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಶ್ರೀ ಭಗವಂತ ಖೂಬಾ, ಶಾಹಿ ಎಕ್ಸ್ ಪೊರ್ಟ್ಸ್ ನ ಶ್ರೀ ಜೆ.ಡಿ ಗಿರಿ, ಅಹ್ಲುವಾಲಿಯಾ- ಜುಬಿಲಂಟ್ ಫುಡ್ ವರ್ಕ್ಸ್ ನ ಶ್ರೀ  ಅಮರದೀಪ್ ಸಿಂಗ್, ಐಟಿಸಿ ಗ್ರೂಪ್ ಕಾರ್ಪೊರೇಟ್ ವ್ಯವಹಾರಗಳ ಉಪಾಧ್ಯಕ್ಷ ಶ್ರೀ ಅನಿಲ್ ರಜಪೂತ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ- ಮೀಸಲಾತಿ ಬಗ್ಗೆ ನಿರ್ಧರಿಸಿದ್ದೇವೆ, ಕ್ರೆಡಿಟ್ ತಗೋಳ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್

5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯ ನಿರೀಕ್ಷೆಯಲ್ಲಿ ಕರ್ನಾಟಕ ಸರ್ಕಾರ: 
ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 2022 ರ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು 5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯನ್ನು ನಿರೀಕ್ಷಿಸುತ್ತಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ಆರ್ ನಿರಾಣಿ ಅಕ್ಟೋಬರ್ 11 (ಮಂಗಳವಾರ) ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News