ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru) ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕಳ್ಳತನ(Chain Snatching) ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದು, ಅವರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ಸರಹದ್ದಿನಲ್ಲಿ ಒಂಟಿ ಮಹಿಳೆಯರನ್ನು ಹಾಗೂ ವೃದ್ಧೆಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಖದೀಮರು(Chain Snatchers) ಬೆಲೆಬಾಳುವ ಮಾಂಗಲ್ಯ ಸರಗಳನ್ನು ಕಿತ್ತುಕೊಂಡು ಎಸ್ಕೇಪ್ ಆಗುತ್ತಿದ್ದರು. ಬೈಕ್ ನಲ್ಲಿ ಬರುತ್ತಿದ್ದ ಸರಗಳ್ಳರು ಚಿನ್ನದ ಸರಗಳನ್ನು ಎಗರಿಸಿಕೊಂಡು ಪರಾರಿಯಾಗುತ್ತಿದ್ದರು.
ಇದನ್ನೂ ಓದಿ: Karnataka MLC Election: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬಂಧಿತ ಮೂವರು ಆರೋಪಿಗಳಿಂದ ಒಟ್ಟು 13 ಪ್ರಕರಣಗಳು ಬೆಳಕಿಗೆ ಬಂದಿದ್ದು, ಸುಮಾರು 50 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳು ಸೇರಿದಂತೆ 1 ಕೆಜಿಯಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್(Bengaluru Police Commissioner Kamal Pant), ‘ಪಿಐ ಹಜರೇಶ್ ನೇತೃತ್ವದಲ್ಲಿ ಸಿಸಿಬಿ ಅಧಿಕಾರಿಗಳು(CCB Police) ಅಮೋಘ ಕಾರ್ಯಾಚರಣೆ ನಡೆಸಿದ್ದು 13 ಸರಗಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಬೆಂಗಳೂರಿನ ವಿವಿಧೆಡೆ ಕಳುವು ಮಾಡಲಾಗಿದ್ದ 50 ಲಕ್ಷ ರೂ. ಮೌಲ್ಯದ 1 ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.
Excellent work by CCB officers led by PI Hazresh in detecting 13 burglary cases.. arrest 3 accused.. seized 1 kg stolen gold ornaments worth Rs 50 lakhs..@CPBlr @BlrCityPolice pic.twitter.com/UdJRMBBeCH
— Sandeep Patil IPS (@ips_patil) November 19, 2021
ಇದನ್ನೂ ಓದಿ: ಪಕ್ಷಕ್ಕಾಗಿ ದುಡಿದ ಸೂರಜ್ ರೇವಣ್ಣಗೆ ಟಿಕೆಟ್!: ದೊಡ್ಡಗೌಡರ ಕುಟುಂಬ ರಾಜಕಾರಣಕ್ಕೆ ಬಿಜೆಪಿ ವ್ಯಂಗ್ಯ
ಆರೋಪಿಗಳು ಕಳೆದ ಕೆಲವು ತಿಂಗಳುಗಳಿಂದ ಸರಗಳ್ಳತ ಮಾಡುತ್ತಿದ್ದರು. ಬೆಂಗಳೂರಿನ(Bengaluru) ಹಲವಾರು ಸ್ಥಗಳಲ್ಲಿ ಒಂಟಿ ಮಹಿಳೆಯರು, ವೃದ್ಧೆಯರು ಇವರ ಟಾರ್ಗೆಟ್ ಆಗಿದ್ದರು. ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಕೊನೆಗೂ ಅವರು ಖಾಕಿಬಲೆಗೆ ಬಿದ್ದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.