ಸರ್ಕಾರದಿಂದ ಮೇಜರ್‌ ಸರ್ಜರಿ: ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ತರಬೇತಿ ವಿಭಾಗದ ಡಿಜಿಪಿಯಾಗಿ ಡಾ.ಪಿ. ರವೀಂದ್ರನಾಥ್, ಡಿಸಿಆರ್‌ಇ ಎಡಿಜಿಪಿಯಾಗಿ ಅರುಣ್ ಚಕ್ರವರ್ತಿ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ಹರಿಶೇಖರನ್ ಅವರನ್ನು ನೇಮಕಗೊಳಿಸಲಾಗಿದೆ. 

Written by - Bhavishya Shetty | Last Updated : May 4, 2022, 01:23 PM IST
  • ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ
  • ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ
  • ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ
ಸರ್ಕಾರದಿಂದ ಮೇಜರ್‌ ಸರ್ಜರಿ: ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ title=
karnataka Police

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ನಡೆದಿದ್ದು, ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ಪಿ. ರವೀಂದ್ರನಾಥ್, ಅರುಣ್ ಚಕ್ರವರ್ತಿ ಮತ್ತು ಹರಿಶೇಖರನ್ ಅವರನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ. 

ಇದನ್ನು ಓದಿ: ಉಚಿತ ಗ್ಯಾಸ್ ಸಿಲಿಂಡರ್‌ ಪಡೆಯಲು ಇಲ್ಲಿದೆ ಸುಲಭ ವಿಧಾನ

ತರಬೇತಿ ವಿಭಾಗದ ಡಿಜಿಪಿಯಾಗಿ ಡಾ.ಪಿ. ರವೀಂದ್ರನಾಥ್, ಡಿಸಿಆರ್‌ಇ ಎಡಿಜಿಪಿಯಾಗಿ ಅರುಣ್ ಚಕ್ರವರ್ತಿ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ಹರಿಶೇಖರನ್ ಅವರನ್ನು ನೇಮಕಗೊಳಿಸಲಾಗಿದೆ. 

ಕಳೆದ ಏಪ್ರಿಲ್‌ 23ರಂದು ಇಬ್ಬರು ಡಿವೈಎಸ್‌ಪಿ ಸೇರಿದಂತೆ ಒಟ್ಟು 179 ಮಂದಿ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ವರ್ಗಾವಣೆ ಪ್ರಕ್ರಿಯೆ ನಡೆದಿದೆ.  ಮೊದಲ ಹಂತದಲ್ಲಿ 21 ಹಿರಿಯ ಐಎಎಸ್‌ ಅಧಿಕಾರಿಗಳು, 2ನೇ ಹಂತದಲ್ಲಿ 41 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು. 

ಇದನ್ನು ಓದಿ: LIC IPO Open : ಇಲ್ಲಿದೆ ಬಂಪರ್ ಹಣ ಗಳಿಸುವ ಅವಕಾಶ..! ದೇಶದ ಅತಿದೊಡ್ಡ IPO ಆರಂಭ

ಸಂಪುಟ ಸಭೆ ಮುಂದೂಡಿಕೆ: 
ಈ ಹಿಂದೆ ನಿಗದಿಯಾಗಿದ್ದ ಗುರುವಾರ (ಮೇ 5)ದಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ. ಈ ಕುರಿತು ಸರ್ಕಾರದಿಂದ ಅಧಿಕೃತ ಮಾಹಿತಿ ಲಭಿಸಿದೆ. ಪರಿಷ್ಕೃತ ಸೂಚನಾ ಪತ್ರ ಹೊರಡಿಸಿರುವ  ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್, ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News