Mangli: ಸಿಂಗರ್ ಮಂಗ್ಲಿ ಕಾರಿನ ಗ್ಲಾಸ್ ಹೊಡೆದ ಪುಂಡರು..!

ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆ ಮೇಲೆ ಹಾಡುಗಳನ್ನು ಹೇಳಿ ವಾಪಸ್ ತೆರಳುವಾಗ ಮಂಗ್ಲಿ ನೋಡಲು ಯುವಕರು ಮುಗಿಬಿದ್ದಿದ್ದರು.

Written by - Zee Kannada News Desk | Last Updated : Jan 22, 2023, 11:53 AM IST
  • ಖ್ಯಾತ ಸಿಂಗರ್ ಮಂಗ್ಲಿ ಕಾರಿನ ಗ್ಲಾಸ್‍ ಹೊಡೆದು ಹಾಕಿದ ಪುಂಡರು
  • ಶನಿವಾರ ರಾತ್ರಿ ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಘಟನೆ
  • ಬಳ್ಳಾರಿ ಉತ್ಸವಕ್ಕೆ ಬಂದಿದ್ದ ಸಿಂಗರ್ ಮಂಗ್ಲಿ ಕಾರಿನ ಗಾಜು ಪೀಸ್ ಪೀಸ್
Mangli: ಸಿಂಗರ್ ಮಂಗ್ಲಿ ಕಾರಿನ ಗ್ಲಾಸ್ ಹೊಡೆದ ಪುಂಡರು..! title=
ಮಂಗ್ಲಿ ಕಾರಿನ ಗ್ಲಾಸ್ ಹೊಡೆದ ಪುಂಡರು!

ಬಳ್ಳಾರಿ: ಖ್ಯಾತ ಸಿಂಗರ್ ಮಂಗ್ಲಿ ಕಾರಿನ ಗ್ಲಾಸ್‍ಅನ್ನು ಪುಂಡರು ಹೊಡೆದು ಹಾಕಿದ್ದಾರೆ. ಶನಿವಾರ ರಾತ್ರಿ ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದೆ.  

ಬಳ್ಳಾರಿ ಉತ್ಸವದ ಹಿನ್ನೆಲೆ ಕಾರ್ಯಕ್ರಮಕ್ಕೆ ಸಿಂಗರ್ ಮಂಗ್ಲಿ ಬಂದಿದ್ದರು. ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆ ಮೇಲೆ ಹಾಡುಗಳನ್ನು ಹೇಳಿ ವಾಪಸ್ ತೆರಳುವಾಗ ಮಂಗ್ಲಿ ನೋಡಲು ಯುವಕರು ಮುಗಿಬಿದ್ದಿದ್ದರು.

ಇದನ್ನೂ ಓದಿ: Bengaluru Student Murder :ʼನನ್ನ ಲವ್‌ ಮಾಡಿ ಇನ್ನೊಬ್ಬನ ಜೊತೆ ಓಡಾಡಿದ್ರೆ ಬಿಟ್ಬಿಡಬೇಕಾ ಸರ್..!ʼ

ವೇದಿಕೆ ಹಿಂಭಾಗದಲ್ಲಿದ್ದ ಮೇಕಪ್ ಟೆಂಟ್‍ಗೆ ನುಗ್ಗಿದ ಪುಂಡರು ದಾಂಧಲೆ ನಡೆಸಿದ್ದರು. ಕೂಡಲೇ ಪೋಲಿಸರಿಂದ ಲಘು ಲಾಟಿ ಪ್ರಹಾರ ನಡೆದಿದೆ. ಆ ವೇಳೆ ಮಂಗ್ಲಿ ಹೋಗುತ್ತಿದ್ದ ಕಾರಿಗೆ ಪುಂಡರು ಕಲ್ಲು ಎಸೆದು ದುರ್ವರ್ತನೆ ತೋರಿದ್ದಾರೆ.

ಬಳ್ಳಾರಿ ಉತ್ಸವದಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಆಂಕರ್ ಅನುಶ್ರೀ ಮತ್ತು ಅರ್ಜುನ್ ಜನ್ಯ ಸೇರಿದಂತೆ ಹಲವು ಕಲಾವಿದರು ಭಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಆರೋಗ್ಯಯುತ ಜೀವನಕ್ಕೆ ಯೋಗಾಸನ ರಹದಾರಿ: ಸಚಿವ ಆರ್.ಅಶೋಕ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News