ಬೆಂಗಳೂರು: ಸಿದ್ದರಾಮಯ್ಯನವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿದ್ದೇವೆ ಎಂದು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆಯೇ ಆಗುತ್ತಿದೆ. ಇಂತಹ ಸುಳ್ಳು ಆರೋಪಗಳ ವಿಷಕುಡಿದು, ಕುಡಿದು ನಾನು ವಿಷಕಂಠನಾಗಿದ್ದೇನೆ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
'ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ.
ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ.— Siddaramaiah (@siddaramaiah) July 25, 2019
ಇದರ ಬೆನ್ನಲ್ಲೇ ಇನ್ನೊಂದು ಟ್ವೀಟ್ ಮಾಡಿರುವ ಅವರು, 'ಸಿದ್ದರಾಮಯ್ಯನವರು ನಮ್ಮನಾಯಕರು'ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಬರೆದಿದ್ದಾರೆ.
'ಸಿದ್ದರಾಮಯ್ಯನವರು ನಮ್ಮನಾಯಕರು'ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು.
ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ.
ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ.— Siddaramaiah (@siddaramaiah) July 25, 2019
ಆರೋಪಗಳ ವಿಷಕುಡಿದು, ಕುಡಿದು ನಾನು ವಿಷಕಂಠನಾಗಿದ್ದೇನೆ:
ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷ ಕುಡಿದು, ಕುಡಿದು ನಾನು ವಿಷಕಂಠನಾಗಿದ್ದೇನೆ ಎಂದು ಮತ್ತೊಂದು ಟ್ವೀಟ್ ಮಾಡಿರುವ ಸಿದ್ದಾರಾಮಯ್ಯ, ಎಂದಿದ್ದರೂ ಸತ್ಯ ಗೆದ್ದೇ ಗೆಲ್ಲಲಿದೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ! ಎಂದಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ.
ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ.
ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ!@INCKarnataka— Siddaramaiah (@siddaramaiah) July 25, 2019