ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ..ಈ ವರ್ಷ ಆರೇ ತಿಂಗಳಿಗೆ ಬಂದ ಟೂರಿಸ್ಟ್ ಎಷ್ಟು ಗೊತ್ತಾ..?

Chikkamanglore : ಕಾಫಿನಾಡು ಚಿಕ್ಕಮಗಳೂರಂದ್ರೆ ನಿಸರ್ಗ ಮಾತೆಯೇ ತವರು. ವರ್ಷಪೂರ್ತಿ ಹಚ್ಚಹಸಿರಿನಿಂದ ಕಂಗೊಳಿಸೋ ತುಂಬುಮತ್ತೈದೆ. ಜಗನ್ಮಾತೆ ಅನ್ನಪೂರ್ಣೇಶ್ವರಿ-ಶಾರದಾಂಭೆಯ ನೆಲಬೀಡು.   

Written by - Savita M B | Last Updated : Jul 16, 2023, 09:29 AM IST
  • ಕಾಫಿನಾಡು ಕೇವಲ ಜಿಲ್ಲೆಯಲ್ಲ.
  • ಧಾರ್ಮಿಕತೆ ಜೊತೆ ಪ್ರವಾಸಿಗರಿಗೆ ಕೇಳಿದ್ದೆಲ್ಲವನ್ನೂ ನೀಡೋ ಅಕ್ಷಯಪಾತ್ರೆ.
  • ಪ್ರವಾಸಿಗರಿಗಂತೂ ನಿಂತಲ್ಲೆ ಮೈಮರೆಸೋ ಹಾಟ್ ಸ್ಪಾಟ್.
ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ..ಈ ವರ್ಷ ಆರೇ ತಿಂಗಳಿಗೆ ಬಂದ ಟೂರಿಸ್ಟ್ ಎಷ್ಟು ಗೊತ್ತಾ..?  title=

ಕಾಫಿನಾಡು ಕೇವಲ ಜಿಲ್ಲೆಯಲ್ಲ. ಧಾರ್ಮಿಕತೆ ಜೊತೆ ಪ್ರವಾಸಿಗರಿಗೆ ಕೇಳಿದ್ದೆಲ್ಲವನ್ನೂ ನೀಡೋ ಅಕ್ಷಯಪಾತ್ರೆ. ಪ್ರವಾಸಿಗರಿಗಂತೂ ನಿಂತಲ್ಲೆ ಮೈಮರೆಸೋ ಹಾಟ್ ಸ್ಪಾಟ್. ಇಲ್ಲಿನ ಸುಂದರ ರಮಣೀಯ ತಾಣಗಳು ವರ್ಷಪೂರ್ತಿ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಲೇ ಇರುತ್ತೆ. ಪ್ರತಿ ವರ್ಷ ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ಈ ವರ್ಷ ಆರೇ ತಿಂಗಳಿಗೆ ಬಂದ ಟೂರಿಸ್ಟ್ ಎಷ್ಟು ಗೊತ್ತಾ ಈ ಸ್ಟೋರಿ ಓದಿ...

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗರಿ, ದತ್ತಪೀಠ, ಮಾಣಿಕ್ಯಧಾರ, ಶಿಶಿಲ ಗುಡ್ಡ, ದೇವರಮನೆಗುಡ್ಡ, ಶೃಂಗೇರಿ, ಹೊರನಾಡು ಹೇಳ್ತಾ ಹೋದ್ರೆ ಕಾಫಿನಾಡ ಪ್ರವಾಸಿ ತಾಣಗಳ ಸಂಖ್ಯೆ ಒಂದೋ ಎರಡೋ. ಧಾರ್ಮಿಕವಾಗಿ ಬಂದ್ರಂತು ಒಬ್ಬಳು ಅನ್ನ ನೀಡೋ ಅನ್ನದಾತೆ. ಮತ್ತೊಬ್ಬಳು ವಿಧ್ಯೆ ನೀಡೋ ವಿದ್ಯಾದೇವತೆ. ಕಾಫಿನಾಡನ್ನ ರಾಜ್ಯದ ಅತೀ ದೊಡ್ಡ ಜಿಲ್ಲೆ ಅಂತಾನೂ ಕರೆಯಲಾಗುತ್ತೆ.

ಇದನ್ನೂ ಓದಿ-ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಕೋರಿಕೆ, ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಜು.18 ರಿಂದ

ಎರಡು ತಾಲೂಕುಗಳನ್ನ ಹೊರತು ಪಡಿಸಿದ್ರೆ ಉಳಿದೆಲ್ಲಾ ತಾಲೂಕುಗಳು ಪ್ರವಾಸಿ ಹಾಗೂ ಧಾರ್ಮಿಕ ತಾಣಗಳೇ. ಕಾಫಿನಾಡ ಭೌಗೋಳಿಕತೆಯಲ್ಲಿ ಅರ್ಧಕರ್ಧ ಕಾಡೇ ಇದ್ದು, ಅಸಂಖ್ಯಾತ ವನ್ಯ ಮೃಗಗಳ ನಾಡು ಕೂಡ. ಇಲ್ಲಿನ ಪ್ರಕೃತಿ ಸೌಂದರ್ಯವನ್ನ ಸವಿಯೋಕೆಂದು ವರ್ಷಪೂರ್ತಿ ಪ್ರವಾಸಿಗರು ಹರಿದು ಬರ್ತಾರೆ. ಎರಡು ವರ್ಷಗಳಿಗೆ ಹೋಲಿಸಿದ್ರೆ ಈ ವರ್ಷ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. 

ಜೂನ್ ಒಂದೇ ತಿಂಗಳಿಗೆ ಜಿಲ್ಲೆಗೆ ಏಳು ಲಕ್ಷ ಟೂರಸ್ಟ್‍ಗಳು ಭೇಟಿ ನೀಡಿದ್ದಾರೆ. 2023ರ ಜನವರಿಯಿಂದ ಜೂನ್ 30ರವರೆಗೆ ಸುಮಾರು 30 ಲಕ್ಷದಷ್ಟು ಪ್ರವಾಸಿಗರು ಭೇಟಿ ನೀಡಿದ್ದಾರೆ. ಅದರಲ್ಲಿ ಗ್ಯಾರಂಟಿ ಸರ್ಕಾರದ ಶಕ್ತಿಯ ಯೋಜನೆಯ ಪಾಲು ಕೂಡ ಒಂದಷ್ಟು ಇದ್ದೇ ಇದೆ. 

ಇದನ್ನೂ ಓದಿ-ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಅಗತ್ಯ ಕ್ರಮ -ಸಿಎಂ ಸಿದ್ದರಾಮಯ್ಯ ಭರವಸೆ

ಹೌದು.... ಕಾಫಿನಾಡ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಇಷ್ಟು ದೊಡ್ಡ ಮಟ್ಟದ ಪ್ರವಾಸಿಗರು ಬರಲು ಗ್ಯಾರಂಟಿ ಸರ್ಕಾರದ ಶಕ್ತಿ ಯೋಜನೆ ಪಾಲು ಇದೆ. ಯಾಕಂದ್ರೆ, ಈ ವರ್ಷ ಜನವರಿಯಿಂದ ಜುಲೈವರೆಗೆ ಸುಮಾರು 30 ಲಕ್ಷದಷ್ಟು ಪ್ರವಾಸಿಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಇಡೀ ವರ್ಷಕ್ಕೆ 50 ಲಕ್ಷವಿತ್ತು, 2021ರಲ್ಲಿ ಇನ್ನೂ ಕಡಿಮೆ ಇತ್ತು. ಈ ಬಾರಿ ಜನವರಿಯಿಂದ ಆರೇ ತಿಂಗಳಿಗೆ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿದೆ. ಆರು ತಿಂಗಳಲ್ಲಿ 30 ಲಕ್ಷ. ಜೂನ್ ಒಂದೇ ತಿಂಗಳಿಗೆ 7 ಲಕ್ಷ. ಇನ್ನು ಈ ವರ್ಷದ ಕೊನೆಗೆ ಜಿಲ್ಲೆಗೆ ಭೇಟಿ ನೀಡಿರೋ ಪ್ರವಾಸಿಗರ ಸಂಖ್ಯೆ ಕೋಟಿ ದಾಟೋದ್ರಲ್ಲಿ ಅನುಮಾನವಿಲ್ಲ. 

ಒಟ್ಟಾರೆ, ಚಿಕ್ಕಮಗಳೂರು ಜಿಲ್ಲೆ ದಿನದಿಂದ ದಿನಕ್ಕೆ ಹೆಚ್ಚು ಪ್ರವಾಸಿಗರನ್ನ ಆಕರ್ಷಿಸುತ್ತಿದೆ. ಇಲ್ಲಿಯ ಪ್ರವಾಸಿ ತಾಣಗಳು ಹಾಗೂ ಇಬ್ಬರು ಅಧಿದೇವತೆಯರನ್ನ ನಂಬಿಕೊಂಡೇ ಬದುಕ್ತಿರೋ ಜನಸಾಮಾನ್ಯರ ಬಾಳು ಕೂಡ ಪ್ರವಾಸಿಗರು ಹೆಚ್ಚಾದಂತೆ ಅವರ ಆರ್ಥಿಕ ಗುಣಮಟ್ಟ ಕೂಡ ಹೆಚ್ತಿದೆ. ಸರ್ಕಾರ ಕೂಡಲೇ ಇತ್ತಗಮನ ಹರಿಸಿ ಪ್ರವಾಸಿಗರಿಗೆ ಬೇಕಾದ ಮೂಲಭೂತ ಸೌಲಭ್ಯ ಕಲ್ಪಿಸಿದ್ರೆ ಸರ್ಕಾರ ಮಾಡೋದೇ ಬೇಡ. ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ತಾನಾಗೇ ಪ್ರವಾಸಿ ಜಿಲ್ಲೆಯಾಗೋದ್ರಲ್ಲಿ ಎರಡು ಮಾತಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News