ಚಾಮರಾಜನಗರ: ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರು ಪೊಲೀಸ್ ವಶಕ್ಕೆ..!

ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘದ ಮಹಾದೇವಸ್ವಾಮಿ ನೇತೃತ್ವದಲ್ಲಿ ಇಂದು ಟ್ರಾಕ್ಟರ್ ರ್ಯಾಲಿ ನಡೆಸಲು ಸಿದ್ಧತೆ ನಡೆಸಲಾಗಿತ್ತು.

Written by - Yashaswini V | Last Updated : Aug 15, 2024, 02:06 PM IST
  • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಟ್ರಾಕ್ಟರ್ ರ್ಯಾಲಿ ನಡೆಸಲು ಮುಂದಾಗಿದ್ದ ಕಬ್ಬು ಬೆಳೆಗಾರರು
  • ಚಾಮರಾಜನಗರದ ಪ್ರವಾಸಿ ಮಂದಿರದ ಬಳಿ ಟ್ರಾಕ್ಟರ್ ರ್ಯಾಲಿ ಆರಂಭವಾಗುತ್ತಿದ್ದಂತೆ ಬಂಧನ
  • 25 ಕ್ಕೂ ಹೆಚ್ಚು ರೈತರನ್ನು ಬಂಧಿಸಿ ಕರೆದೊಯ್ದ ಪೊಲೀಸರು
ಚಾಮರಾಜನಗರ: ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರು ಪೊಲೀಸ್ ವಶಕ್ಕೆ..! title=

ಚಾಮರಾಜನಗರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರನ್ನು ಚಾಮರಾಜನಗರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘದ ಮಹಾದೇವಸ್ವಾಮಿ ನೇತೃತ್ವದಲ್ಲಿ ಇಂದು ಟ್ರಾಕ್ಟರ್ ರ್ಯಾಲಿ (Tractor Rally ) ನಡೆಸಲು ಸಿದ್ಧತೆ ನಡೆಸಲಾಗಿತ್ತು. ಚಾಮರಾಜನಗರ ಪ್ರವಾಸಿ ಮಂದಿರದಿಂದ ರ್ಯಾಲಿ ಆರಂಭವಾಗುತ್ತಿದ್ದಂತೆ ಅನುಮತಿ ನಿರಾಕರಣೆ ಕಾರಣದಿಂದ 25 ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು

ಇದನ್ನೂ ಓದಿ- ಮಹಿಳೆಯನ್ನು ಎಳೆದಾಡಿ ಕಿಸ್ ಮಾಡಿ ಪರಾರಿಯಾಗಿದ್ದ ಕಾಮುಕ ಕ್ಯಾಬ್ ಚಾಲಕನ ಬಂಧನ..!

ಸಂಯುಕ್ತ ಕಿಸಾನ್  ಮೋರ್ಚಾ (Samyukta Kisan Morcha)  ಕರೆ ಮೇರೆಗೆ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘವು ಟ್ರ್ಯಾಕ್ಟರ್ ರ್ಯಾಲಿಯನ್ನು ಪ್ರವಾಸಿ  ಮಂದಿರದ ರಸ್ತೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಸಲು ತೀರ್ಮಾನಿಸಲಾಗಿತ್ತು.

ಇದನ್ನೂ ಓದಿ- ಕುಮಾರಸ್ವಾಮಿಗಳೇ ನಿಮ್ಮ ಡಬಲ್ ಸ್ಟ್ಯಾಂಡರ್ಡ್‌ಗೆ ಮಿತಿ ಇಲ್ಲ: ಕಾಂಗ್ರೆಸ್‌ ಟೀಕೆ

ಎಂಎಸ್ ಪಿ ಖಾತ್ರಿ ಕಾನೂನು ಜಾರಿ ಮಾಡಬೇಕು, ಕೃಷಿ ಬಳಕೆಗೆ ಮಾಡುವ ಟ್ಯಾಕ್ಟರ್ ಉಪಕರಣಗಳ ಮೇಲಿನ ಜಿಎಸ್ ಟಿ ಹಿಂಪಡೆಯಬೇಕು,  ಡಾ.ಸ್ವಾಮಿನಾಥನ್ ವರದಿ ಜಾರಿ ಆಗಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಈ ರ್ಯಾಲಿ ನಡೆಯುತ್ತಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News