Tumakuru lokasabha election result : ಗೆಲುವು ತಂದು ಕೊಟ್ಟ ತುಮಕೂರಿನ ಜನತೆಗೆ ಧನ್ಯವಾದ ಹೇಳಿದ ಸೋಮಣ್ಣ

ಎರಡು ಬಾರಿ ಸೋತ ನನಗೆ ಅಮಿತ್  ಶಾ ಮತ್ತೆ ಅವಕಾಶ ಕೊಟ್ಟರು. ಅವಕಾಶ ಕೊಟ್ಟಿರುವುದಕ್ಕಾಗಿ ಅಮಿತ್ ಶಾಗೆ ಧನ್ಯವಾದ ಹೇಳುತ್ತೇನೆ ಎಂದರು. ಇದೆ ವೇಳೆ  ಯಡಿಯೂರಪ್ಪಗೂ ಧನ್ಯವಾದ ಸಲ್ಲಿಸುವುದಾಗಿ ಹೇಳಿದ್ದಾರೆ.  

Written by - Ranjitha R K | Last Updated : Jun 4, 2024, 01:17 PM IST
  • ಕ್ಷೇತ್ರದ ಜನತೆಗೆ ಧನ್ಯವಾದ ಹೇಳಿದ ವಿ.ಸೋಮಣ್ಣ
  • ಅವಕಾಶ ಕೊಟ್ಟಿರುವುದಕ್ಕಾಗಿ ಅಮಿತ್ ಶಾಗೆ ಧನ್ಯವಾದ
  • ಮಾಧುಸ್ವಾಮಿ ಬಗ್ಗೆ ಅಸಮಾಧಾನ
Tumakuru lokasabha election result : ಗೆಲುವು ತಂದು ಕೊಟ್ಟ ತುಮಕೂರಿನ ಜನತೆಗೆ ಧನ್ಯವಾದ ಹೇಳಿದ ಸೋಮಣ್ಣ  title=

ತುಮಕೂರು : ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಕ್ಷೇತ್ರದ ಜನತೆಗೆ ಧನ್ಯವಾದ ಹೇಳಿದ್ದಾರೆ. ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಸಲ್ಲಿಸುವುದಾಗಿ ಹೇಳಿದ್ದಾರೆ. ಎರಡು ಬಾರಿ ಸೋತ ನನಗೆ ಅಮಿತ್ ಶಾ ಮತ್ತೆ ಅವಕಾಶ ಕೊಟ್ಟರು. ಅವಕಾಶ ಕೊಟ್ಟಿರುವುದಕ್ಕಾಗಿ ಅಮಿತ್ ಶಾಗೆ ಧನ್ಯವಾದ ಹೇಳುತ್ತೇನೆ ಎಂದರು. ಇದೇ ವೇಳೆ ಯಡಿಯೂರಪ್ಪಗೂ ಧನ್ಯವಾದ ಸಲ್ಲಿಸುವುದಾಗಿ ಹೇಳಿದ್ದಾರೆ.

ನನ್ನ ಆರಾಧ್ಯ ದೈವ ಶಿವಕುಮಾರ್ ಶ್ರೀಗಳು ಹಾಗೂ ಚುಂಚನಗಿರಿ ಶ್ರೀಗಳ ಆಶೀರ್ವಾದದಿಂದ ಮತ್ತೆ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ದೇಶದ ವ್ಯವಸ್ಥೆಯಲ್ಲಿ ಜನಪರ ಕಾರ್ಯಕ್ರಮದಿಂದ ನಾವೆಲ್ಲ ಗೆದ್ದಿದ್ದೇವೆ.ಜೆಡಿಎಸ್ ಮತ್ತು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಮುಖಂಡರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸೋಮಣ್ಣ ಹೇಳಿದ್ದಾರೆ. 

ಇದನ್ನೂ ಓದಿ :  Karnataka Lok Sabha Election Results 2024: ಕರ್ನಾಟಕದ 'ಲೋಕ' ಸಮರದಲ್ಲಿ ಗೆದ್ದವರು ಯಾರು ಸೋತವರು ಯಾರು?

ಹೊರಗಿನ ಅಭ್ಯರ್ಥಿ ಎಂದು ಪದೇ ಪದೇ ಎಚ್ಚರಿಕೆ ಕೊಡುತ್ತಿದ್ದರು. ಅದನ್ನು  ಎಚ್ಚರಿಕೆ ಗಂಟೆ ಎಂದೇ ಭಾವಿಸಿ ಹೆಚ್ಚಿಗೆ ದುಡಿದೆ. ಪರಿಣಾಮವಾಗಿ ಗೆಲುವು ಸಾಧಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

ದೇಶದಲ್ಲಿ ಸ್ವಲ್ಪ ಹಿನ್ನೆಡೆ ಆಗಿದೆ.ಇಂಡಿಯಾ ಒಕ್ಕೂಟದ ಅಪಪ್ರಚಾರವೇ ಇದಕ್ಕೆ  ಕಾರಣ. ಸಂವಿಧಾನ ಬದಲಾವಣೆ ಹಾಗೂ ಮೀಸಲಾತಿ ತೆಗಿತಾರೆ ಅನ್ನೋ ಅಪಪ್ರಚಾರ ಮಾಡಿದ್ದಾರೆ. ಇದು ಸ್ವಲ್ಪ ಹಿನ್ನೆಡೆಗೆ ಕಾರಣವಾಗಿದೆ ಎಂದರು. 
ಕುಮಾರಸ್ವಾಮಿ ಅವರು ಮಂತ್ರಿ ಆಗಲಿ ಎನ್ನುವ ಆಶಯ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ :  Bengaluru South Lok Sabha Election Results 2024: ಈ ಬಾರಿಯಾದರೂ ಬಿಜೆಪಿ ಭದ್ರಕೋಟೆಗೆ ಲಗ್ಗೆ ಇಡುತ್ತಾ ಕಾಂಗ್ರೆಸ್..?

ಇನ್ನು ಮಾಧುಸ್ವಾಮಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸೋಮಣ್ಣ,  ಅವರನ್ನು ಪಕ್ಷಕ್ಕೆ  ಕರೆದುಕೊಂಡು ಬಂದೆ. ಆದರೆ ಅವರ ನಡವಳಿಕೆ, ನೀಚ ಬುದ್ದಿಯನ್ನು ಬಿಟ್ಟು ಸರಿಹೋಗಲಿ ಎಂದು ಹೇಳಿದ್ದರೆ. ಜಿ.ಪರಮೇಶ್ವರ್ ಹಾಗೂ ಕೆ ಎನ್ ರಾಜಣ್ಣ ನಾವು ಹಳೇ ಸ್ನೇಹಿತರು. ಅವರ್ಯಾರು ನಮ್ಮ ವಿರುದ್ಧ ಹೆಚ್ಚಿಗೆ ಮಾತಾಡಿಲ್ಲ. ಕ್ಷೇತ್ರದ ಅಭಿವೃದ್ದಿಗೆ ನಾವೆಲ್ಲಾ ಈಗ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News