ಸ್ವಾತಂತ್ರ್ಯ ದಿನದಂದೇ ದುರಂತ: ಧ್ವಜಸ್ತಂಬ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು!

ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ ಓರ್ವ ಮೃತಪಟ್ಟಿದ್ದಾನೆ.

Written by - Zee Kannada News Desk | Last Updated : Aug 15, 2021, 12:16 PM IST
  • 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಂದೇ ತುಮಕೂರು ಜಿಲ್ಲೆಯಲ್ಲಿ ದುರಂತ
  • ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ 16 ವರ್ಷದ ಬಾಲಕ ಚಂದನ್ ಸಾವು
  • ತುಮಕೂರು ಜಿಲ್ಲೆಯ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ನಡೆದಿರುವ ದುರ್ಘಟನೆ
ಸ್ವಾತಂತ್ರ್ಯ ದಿನದಂದೇ ದುರಂತ: ಧ್ವಜಸ್ತಂಬ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು!  title=
ವಿದ್ಯುತ್ ಸ್ಪರ್ಶಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ

ತುಮಕೂರು: 75ನೇ ಸ್ವಾತಂತ್ರ್ಯೋತ್ಸವ(75th Independence Day)ದ ಸಂಭ್ರಮದಂದೇ ತುಮಕೂರು ಜಿಲ್ಲೆಯಲ್ಲಿ ದುರಂತವೊಂದು ನಡೆದಿದೆ. ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಕೋರಾ ಹೋಬಳಿಯ ಕರೀಕೆರೆ ಗ್ರಾಮ(Karikere Village)ದಲ್ಲಿ ಈ ದುರ್ಘಟನೆ ನಡೆದಿದ್ದು, ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ ಓರ್ವ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. 16 ವರ್ಷದ ಬಾಲಕ ಚಂದನ್ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಶಶಾಂಕ್ (16) ಮತ್ತು ಚಂದನ್ (22) ಗಾಯಗೊಂಡಿದ್ದು, ಇಬ್ಬರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಆಗಸ್ಟ್ 14ನ್ನು ಇನ್ಮುಂದೆ 'ವಿಭಜನೆಯ ಕರಾಳ ನೆನಪಿನ ದಿನ' ಎಂದು ಆಚರಿಸಲಾಗುವುದು: ಪ್ರಧಾನಿ ಮೋದಿ

75ನೇ ಸ್ವಾತಂತ್ರ್ಯೋತ್ಸವ(75th Independence Day)ಕ್ಕೆ ಕರೀಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿತ್ತು. ಪರಿಣಾಮ ಬಾಲಕ ಚಂದನ್ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ಬಾಲಕರು ಪ್ರಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಪಿಂಚಣಿದಾರರಿಗೆ ಸಿಹಿ ಸುದ್ದಿ : NPS ಅಡಿಯಲ್ಲಿ ಶೇ.30 ರಷ್ಟು ಪಿಂಚಣಿ ಹೆಚ್ಚಳ

ಈ ಮೂವರು ಕರೀಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು. ಸ್ವಾತಂತ್ರ್ಯ ದಿನಾಚರಣೆ(Independence Day)ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸಲು ಶಾಲೆಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಶಿಕ್ಷಕರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಅಂತಾ ಮೃತ ಬಾಲಕನ ಪೋಷಕರ ಆರೋಪಿಸಿದ್ದಾರೆ. ತುಮಕೂರಿನ ಖಾಸಗಿ ಆಸ್ಪತ್ರೆಗೆ ಡಿಡಿಪಿಐ ನಂಜಪ್ಪ ಭೇಟಿ ನೀಡಿದ್ದು, ಗಾಯಗೊಂಡಿರುವ ಬಾಲಕರ ಆರೋಗ್ಯ ವಿಚಾರಿಸಿದ್ದಾರೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.    

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News