ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್​ ಚೈನ್ ಲಿಂಕ್ ಕಟ್... ನದಿ ಪಾತ್ರದ ಜನರಿಗೆ ಎಚ್ಚರಿಕೆ!

ತುಂಗಭದ್ರಾ ಡ್ಯಾಂನಿಂದ ಸುಮಾರು 60 ಟಿಎಂಸಿ ಅಡಿ ನೀರು ಬಿಡುಗಡೆ ಮಾಡಿದ ಬಳಿಕವೇ ಇದರ ಪುನಶ್ಚೇತನ ಕೆಲಸ ನಡೆಯುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.   

Written by - Chetana Devarmani | Last Updated : Aug 11, 2024, 10:34 AM IST
  • ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್​ ಚೈನ್ ಕಟ್‌
  • ಏಕಾಏಕಿ ನದಿಗೆ ಹರಿದು ಬಂದ 35 ಸಾವಿರ ಕ್ಯೂಸೆಕ್ ನೀರು
  • ಕಂಪ್ಲಿ ಪಟ್ಟಣದ ಜನರಲ್ಲಿ ಆತಂಕ
ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್​ ಚೈನ್ ಲಿಂಕ್ ಕಟ್... ನದಿ ಪಾತ್ರದ ಜನರಿಗೆ ಎಚ್ಚರಿಕೆ!  title=

ಹೊಸಪೇಟೆ: ತುಂಗಭದ್ರಾ ಅಣೆಕಟ್ಟಿನ  ಒಟ್ಟು 33 ಗೇಟ್‌ಗಳ ಪೈಕಿ 19ನೇ ಕ್ರಸ್ಟ್‌ ಗೇಟ್​ ಚೈನ್ ಲಿಂಕ್ ಕಟ್ ಆಗಿದ್ದು, ಆತಂಕ ಮೂಡಿಸಿದೆ. ಶನಿವಾರ ಮಧ್ಯರಾತ್ರಿ ಸರಪಳಿ ತುಂಡಾಗಿ 35 ಸಾವಿರ ಕ್ಯೂಸೆಕ್ ನೀರು ಏಕಾಏಕಿ ನದಿಗೆ ಹರಿದು ಬಂದಿದೆ ಎಂದು ತಿಳಿದುಬಂದಿದೆ. 

70 ವರ್ಷಗಳ ನಂತರ ಮೊದಲ ಬಾರಿಗೆ ಇಂಥದ್ದೊಂದು ಘಟನೆ ನಡೆದಿದೆ ಎನ್ನಲಾಗುತ್ತಿದೆ. ತುಂಗಭದ್ರಾ ಡ್ಯಾಂನಿಂದ ಸುಮಾರು 60 ಟಿಎಂಸಿ ಅಡಿ ನೀರು ಬಿಡುಗಡೆ ಮಾಡಿದ ಬಳಿಕವೇ ಇದರ ಪುನಶ್ಚೇತನ ಕೆಲಸ ನಡೆಯುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇದನ್ನೂ ಓದಿ: ಗಂಡನ ತಲೆ ಒಡೆದು ಕೈಯಿಂದ ಬುರುಡೆಯೊಳಗಿನ ರಕ್ತ ಮಾಂಸ ತೆಗೆದ ಮಹಿಳೆ..! ಕಾರಣ ಇಷ್ಟೇನಾ..?

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಭಾನುವಾರ ಬೆಳ್ಳಂಬೆಳಗ್ಗೆ ಅಣೆಕಟ್ಟೆಗೆ ಭೇಟಿ ನೀಡಿದ್ದರು. ಶನಿವಾರ ರಾತ್ರಿ ನಡೆದ ಘಟನೆಯ ನಂತರ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್‌ಗಳಿಂದ ನೀರು ಬಿಡಲಾಗುತ್ತಿದೆ. ಸದ್ಯ ಅಣೆಕಟ್ಟಿನಿಂದ ಸುಮಾರು ಒಂದು ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಬಿಡಲಾಗುತ್ತಿದೆ.

ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀಡು ಹರಿದು ಬರುತ್ತಿದೆ. ಇದರಿಂದ ಕಂಪ್ಲಿ ಪಟ್ಟಣದ ಜನರಲ್ಲಿ ಆತಂಕ ಮೂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಂಪ್ಲಿ ಸೇತುವೆ ಬಳಿ ಪೊಲೀಸ್ ಬಂದೋಬಸ್ಥ ನಿಯೋಜಿಸಲಾಗಿದೆ.

ಇದನ್ನೂ ಓದಿ: Crime News: 14 ತಿಂಗಳಲ್ಲಿ 9 ಮಹಿಳೆಯರನ್ನು ಕೊಂದ ಸೀರಿಯಲ್ ಕಿಲ್ಲರ್..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News