ಬೆಂಗಳೂರು : ನಿನ್ನೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದೆ. ಡಿಸಿಎಂ ಸೂಚನೆ ಮೇರೆಗೆ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದು, ಪೊಲೀಸ್ರು, ಬಿಬಿಎಂಪಿ ಹಾಗೂ ಇಂಧನ ಇಲಾಖೆಯಿಂದ ತನಿಖೆ ನಡೆಸಲಾಗುತ್ತಿದೆ. ಈ ಮಧ್ಯೆ ಹಲಸೂರ್ ಗೇಟ್ ಪೊಲೀಸ್ರು ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದು, ಅವ್ರಿಂದ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ನಿನ್ನೆ ಬಿಬಿಎಂಪಿಯ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅವಘಡದ ತನಿಖೆಯನ್ನ ಚುರುಕಿನಿಂದ ನಢಸಲಾಗ್ತಿದೆ. ಘಟನೆ ಸಂಬಂಧ ದಾಖಲಾದ ದೂರಿನ ಅನ್ವಯ ನೆಗ್ಲಿಜೆನ್ಸ್ ಆಕ್ಟ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರೋ ಹಲಸೂರ್ ಗೇಟ್ ಪೊಲೀಸ್ರು ಎಇಇ ಆನಂದ್ ಮತ್ತು ಡಿ ಗ್ರೂಪ್ ನೌಕರನಾದ ಸುರೇಶ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸಿದ್ದು, ಘಟನೆ ಸಂಬಂಧ ಸ್ಪೋಟಕ ಮಾಹಿತಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ವಿಧಾನಸಭೆ ಸೋಲಿನ ಬಗ್ಗೆ ಸೋಮಣ್ಣ ಅಸಮಾಧಾನ.. ಬಿಜೆಪಿ ಬಿಟ್ಟು ಕಾಂಗ್ರೆಸ್ ಬಾಗಿಲು ಬಡಿಯುತ್ತಿದ್ದರಾ ಸೋಮಣ್ಣ.?
ಇನ್ನು ಘಟನೆಗೆ ಸಂಬಂಧಿಸಿದಂತೆ ನಿಖರ ಕಾರಣ ಪತ್ತೆಯಚ್ಚಲು ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ ಸೂಚನೆ ಮೇಲೆ ಪ್ರಕರಣವನ್ನ ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಬಿಬಿಎಂಪಿಯ ಮುಖ್ಯ ಇಂಜಿನಿಯರ ಸೇರಿದಂತೆ ತಾಂತ್ರಿಕ ವಿಭಾಗದಿಂದ ಆಂತರಿಕ ತನಿಖೆ ನಡೆಯುತ್ತಿದ್ರೆ, ಇಂಧನ ಇಲಾಖೆ, ಫೈರ್ಸ್ ಡಿಫಾರ್ಟ್ಮೆಂಟ್ ಹಾಗೂ ಪೊಲೀಸ್ ಇಲಾಖೆಯಿಂದಲೂ ಪ್ರತ್ಯೇಕ ತನಿಖೆ ನಡೆಯುತ್ತಿದೆ. ಹೀಗಾಗಿ ತಡರಾತ್ರಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ನೀಡಿದ ದೂರಿನ ಮೇಲೆ ಎ1 ಆರೋಪಿಯನ್ನಾಗಿ ಎಇಇ ಆನಂದ್, ಎ2 ಆರೋಪಿಯನ್ನಾಗಿ ಸ್ವಾಮಿ ಹಾಗೂ ಎ3 ಗುಮಾಸ್ತ ಸುರೇಶ್ ವಿರುದ್ದ ಕೇಸ್ ದಾಖಲಿಸಿಕೊಂಡು ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ.
ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬಿಟುಮಿನ್ ಟೆಸ್ಟ್ ಮಾಡಲು ನುರಿತ ತಜ್ಞರಿರಬೇಕು. ಆದ್ರೆ ಲ್ಯಾಬ್ ನಲ್ಲಿ ಟಾರ್ ನ ಬಿಟುಮಿನ್ ಟೆಸ್ಟ್ ನ್ನ ಬಿಬಿಎಂಪಿ ಡಿ ಗ್ರೂಪ್ ನೌಕರ ಮಾಡ್ತಿದ್ದನಂತೆ. ಅದು ಒಂದ್ ವರ್ಷದಿಂದ.ಹೀಗಾಗಿ ಆತ ಮಾಡಿದ ಯಡವಟ್ಟಿನಿಂದಲೇ ನಿನ್ನೆ ಬೆಂಕಿ ಅವಘಡ ಸಂಭವಿಸಿದೆ. ಈ ಕುರಿತು ಸ್ವತಃ ಎಇಇ ಆದ ಆನಂದ್ ಘಟನೆ ಹೇಗಾಯ್ತು ಎಂಬುದರ ಬಗ್ಗೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಬಳಿ ಹೇಳಿಕೊಂಡಿರೋ ಆಡಿಯೋ ಕ್ಲಿಪ್ ನಲ್ಲಿ ಬಹಿರಂಗಗೊಂಡಿದೆ.
ಇದನ್ನೂ ಓದಿ: ವಿಮೆ ತಿರಸ್ಕರಿಸಿದ ರಿಲೈನ್ಸ ಜನರಲ್ ಇನ್ಸುರೆನ್ಸ್ ಕಂಪನಿಗೆ ರೂ.5 ಲಕ್ಷ 32.5 ಸಾವಿರಗಳ ದಂಡ
ಇನ್ನು ಬಿಟಮಿನ್ ಟೆಸ್ಟ್ ನ ಅಂತಿಮ ಟೆಸ್ಟ್ ಫೈರ್ ಟೆಸ್ಟ್ ವೇಳೆ ತೋರಿದ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದಹ ಎಫ್ಎಸ್ ಎಲ್ ಪ್ರಾಥಮಿಕ ವರದಿಯಿಂದ ಬೆಳಕಿಗೆ ಬಂದಿದೆ. ಪೂರ್ಣ ಪ್ರಮಾಣದ ವರದಿ ಬಂದ ಬಳಿಕ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ.
ಇದರ ಮಧ್ಯೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅಗ್ನಿಶಾಮಕ ದಳ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದು, ಅಗ್ನಿ ಸುರಕ್ಷತಾ ಕ್ರಮಗಳನ್ನ ಬಿಬಿಎಂಪಿ ಸಂಪೂರ್ಣವಾಗಿ ನಿರ್ಲಕ್ಷಿಸಿರೋದು ಬೆಳಕಿಗೆ ಬಂದಿದೆ.ಈ ಸಂಬಂಧ ಸಂಪೂರ್ಣಮಲ ಮಾಹಿತಿ ಕಲೆ ಹಾಕಿದ್ದು, ತನಿಖೆಯನ್ನ ಮುಂದುವರೆಸಿದ್ದು, ಮುಂದಿನ ತನಿಖೆಯಲ್ಲಿ ಘಟನೆ ಸಂಬಂಧ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.