ಬೆಂಗಳೂರು: ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಮಾಡಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ. ಈ ಸಂಬಂಧ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ‘ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ : ಸಮಗ್ರ ತನಿಖೆಗೆ ಸುನೀಲ್ ಕುಮಾರ್ ಆಗ್ರಹ
‘ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು’ ಎಂದು ಇದೇ ವೇಳೆ ಅವರು ತಿಳಿಸಿದರು.
ಏನಿದು ವಿವಾದ?: ಉಡುಪಿ ನಗರದ ಅಂಬಲಪಾಡಿ ಬೈಪಾಸ್ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿದ್ದಾರೆ. ಬಳಿಕ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದರು ಅಂತಾ ಆರೋಪಿಸಲಾಗಿದೆ. ಈ ಕೃತ್ಯ ಬೆಳಕಿಗೆ ಬಂದ ಬಳಿಕ ದೊಡ್ಡ ಗಲಾಟೆಯೇ ನಡೆದಿದೆ. ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ.
ಇದನ್ನೂ ಓದಿ: ಕೇಂದ್ರ ವಾಸ್ತವ್ಯ ವಿಷಯಗಳನ್ನು ಮರೆಮಾಚುತ್ತಿದೆ : ಡಿಕೆ ಶಿವಕುಮಾರ್ ಹೇಳಿಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.