ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

 

Written by - Zee Kannada News Desk | Last Updated : Feb 23, 2023, 11:51 AM IST
  • ಮಗಳ ಮದುವೆಗಾಗಿ ಪಾಲಕರು ಸಾಲವನ್ನು ಮಾಡಿದ್ದರು,
  • ಇದರ ಬಾಧೆ ತಾಳಲಾರದೆ ಈಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
  • ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಮಗಳು ಸಹ ಆತ್ಮಹತ್ಯೆಗೆ ಶರಣಾಗಿದ್ದಾಳೆ
ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ! title=
ಸಾಂದರ್ಭಿಕ ಚಿತ್ರ

ಹಾವೇರಿ: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ಈಗ ಮೃತಪಟ್ಟಿರುವವರನ್ನು ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಎನ್ನಲಾಗಿದೆ.

ಇದನ್ನೂ ಓದಿ: ಡಿ ರೂಪಾ ಗೆ ಲೀಗಲ್ ನೋಟೀಸ್ ಕಳಿಸಿದ ರೋಹಿಣಿ ಸಿಂಧೂರಿ

ಮಗಳ ಮದುವೆಗಾಗಿ ಪಾಲಕರು ಸಾಲವನ್ನು ಮಾಡಿದ್ದರು,ಇದರ ಬಾಧೆ ತಾಳಲಾರದೆ ಈಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಮಗಳು ಸಹ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: Crime News: ಬಡ್ಡಿ ಹಣ ಕೊಡಲಿಲ್ಲವೆಂದು ರಸ್ತೆಯಲ್ಲಿಯೇ ವ್ಯಕ್ತಿಗೆ ಥಳಿತ!

ಅವರದ್ದು ಸುಮಾರು 25 ಲಕ್ಷ ರೂಪಾಯಿ ಸಾಲದ ಬಾಕಿ ಇತ್ತು ಎನ್ನಲಾಗಿದೆ.ಈಗ ಘಟನೆ ನಡೆದಿರುವ ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News