ಬೆಳಗಾವಿ ಚಳಿಗಾಲದ ಅಧಿವೇಶನ: ಏಕರೂಪ ನಾಗರಿಕ ಸಂಹಿತೆ (UCC) ಮಂಡನೆ?

2019 ರಲ್ಲಿ ವಿರೋಧ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಭಾರಿ ವಿರೋಧ ಮಾಡಿದ್ದ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಈ ಬಾರಿಯ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ.   

Written by - Prashobh Devanahalli | Edited by - Yashaswini V | Last Updated : Dec 19, 2022, 09:05 AM IST
  • ಚುನಾವಣೆ ಹೊಸ್ತಿಲಲ್ಲಿ ಇರುವ ಸಂದರ್ಭದಲ್ಲಿ ಆಡಳಿತ ಬಿಜೆಪಿ ಸರ್ಕಾರ ಹಿಂದೂ ವೋಟ್ ಬ್ಯಾಂಕ್ ಗಳಿಸಲು ಪ್ರಯತ್ನ ನಡೆಸುತ್ತಿದೆ.
  • ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಸಹಜವಾಗಿ ವಿಪಕ್ಷಗಳು ವಿರೋಧ ಮಾಡುವ ಸಾಧ್ಯತೆ
  • ಈ ಮೂಲಕ ಕಲಾಪದ ದಿಕ್ಕನ್ನು ಬದಲಿಸುವ ಪ್ರಯತ್ನದಲ್ಲಿ ಬಿಜೆಪಿ
ಬೆಳಗಾವಿ ಚಳಿಗಾಲದ ಅಧಿವೇಶನ: ಏಕರೂಪ ನಾಗರಿಕ ಸಂಹಿತೆ (UCC) ಮಂಡನೆ? title=
Winter Session

ಬೆಳಗಾವಿ : ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸೋಮವಾರದಿಂದ(ಡಿಸೆಂಬರ್ 10 ) ಡಿ. 30ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ಆರು ಪ್ರಮುಖ ವಿಧೇಯಕಗಳ ಮಂಡನೆಯಾಗಲಿವೆ.

2019 ರಲ್ಲಿ ವಿರೋಧ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಭಾರಿ ವಿರೋಧ ಮಾಡಿದ್ದ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಈ ಬಾರಿಯ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ. 

ಇದನ್ನೂ ಓದಿ- Siddaramaiah : ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಸಾವರ್ಕರ್ ಇದ್ದರು : ಸಿದ್ದರಾಮಯ್ಯ

ಚುನಾವಣೆ ಹೊಸ್ತಿಲಲ್ಲಿ ಇರುವ ಸಂದರ್ಭದಲ್ಲಿ ಆಡಳಿತ ಬಿಜೆಪಿ ಸರ್ಕಾರ ಹಿಂದೂ ವೋಟ್ ಬ್ಯಾಂಕ್ ಗಳಿಸಲು ಪ್ರಯತ್ನ ನಡೆಸುತ್ತಿದೆ. ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಸಹಜವಾಗಿ ವಿಪಕ್ಷಗಳು ವಿರೋಧ ಮಾಡಲಿದ್ದು, ಈ ಮೂಲಕ ಕಲಾಪದ ದಿಕ್ಕನ್ನು ಬದಲಿಸುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. 

ಇದನ್ನೂ ಓದಿ- “ಉದ್ದಿಮೆ ಏಳಿಗೆಯ ಹೆಸರಲ್ಲಿ ಲಾರಿ ಮಾಲೀಕರ ಮೇಲೆ ಸರ್ಕಾರದಿಂದ ಶೋಷಣೆ”

ಹಿಂದೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಿತ್ತು. ಇದಕ್ಕೂ ಭಾರಿ ವಿರೋಧ ವ್ಯಕ್ತವಾಗಿದ್ದರ ಜೊತೆಗೆ, ಗುಜರಾತ್‌ ಚುನಾವಣೆಗೆ ಮುನ್ನ ನಡೆದಿದ್ದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಗಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News