ಬಳ್ಳಾರಿ : ಇದೇ 23 ರಂದು ಜಿಲ್ಲೆಯ ಸಂಡೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶ್ರೀರಾಮುಲು, ನಗರದ ರಸಿಡೆನ್ಸಿಯಲ್ ಶಾಲೆಯಲ್ಲಿ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಅಂದೇ ತೋರಣಗಲ್ಲಿನಲ್ಲಿ ನಾಲ್ಕು ಜಿಲ್ಲೆ ಬಿಜೆಪಿ ಮುಖಂಡರ ಸಭೆ ನಡೆಸಲಿದ್ದಾರೆ. ಜಿಂದಾಲ್ ಕಂಪನಿ ಯಲ್ಲಿರುವ ಹಯಾತ್ ಹೋಟೆಲ್ ನಲ್ಲಿ ಕೋರ ಕಮೀಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೋರ ಕಮೀಟಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಸಚಿವರು ಭಾಗಿಯಾಗಲಿದ್ದಾರೆ. ಸಂಡೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯ ವಿಧಾನ ಸಭೆಯ ಚುನಾವಣೆ ಹಿನ್ನಲೆ ಅಮಿತ್ ಶಾ ಕೋರ ಕಮೀಟಿ ಸಭೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಇದು ಬಿಜೆಪಿ ಸರ್ಕಾರದ ವಿದಾಯದ ಬಜೆಟ್ ಆಗಿದೆ- ಸಚಿನ್ ಪೈಲೆಟ್
ಇನ್ನು ನಿನ್ನೆ ಮಂಡನೆಯಾದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವಿಪಕ್ಷ ನಾಯಕರು ಬಜೆಟ್ ವೇಳೆ ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದಿದ್ದರು, ಶಿಷ್ಟಾಚಾರ ಪಾಲಿಸದೆ ಅಗೌರವ ತೋರುವ ಕೆಲಸ ಕಾಂಗ್ರೆಸ್ ಮಾಡಿದೆ, ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ಡ್ರಾಮಾ ಆರಂಭಿಸಿದ್ದು, ಅದೊಂದು ಡ್ರಾಮಾ ಕಂಪನಿ, ಬಜೆಟ್ ಜನರಿಗೆ ತಲುಪದಂತೆ ಮಾಡಬೇಕೆಂಬುದು ಕಾಂಗ್ರೆಸ್ ಉದ್ದೇಶ,ಮುಂದಿನ ದಿನಗಳಲ್ಲಿ ಜನರೆ ತಕ್ಕ ಪಾಠ ಕಲಿಸಲಿದ್ದಾರೆ. ಚುನಾವಣೆಯ ದೃಷ್ಟಿಯನ್ನು ಇಟ್ಟುಕೊಂಡು ಬಜೆಟ್ ಮಂಡಿಸಿಲ್ಲ, ಆರ್ಥಿಕ ದೃಷ್ಟಿಕೋನವಿಟ್ಟು ಕೊಂಡು ಸಿಎಂ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : "ಸಿಎಂ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಂತೆ ಇದೆ"
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.