Amit Shah: ಚಾಲುಕ್ಯರ ನಾಡಲ್ಲಿ ಚಾಣಕ್ಯ: ಬಾದಾಮಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ!

ಎರಡನೇ ದಿನದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.17ರಂದು ಜಿಲ್ಲೆಗೆ ಭೇಟಿ ನೀಡಿ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.

Last Updated : Jan 17, 2021, 03:33 PM IST
  • ಎರಡನೇ ದಿನದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.17ರಂದು ಜಿಲ್ಲೆಗೆ ಭೇಟಿ ನೀಡಿ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.
  • ಎಂ.ಅರ್.ಎನ್ (ನಿರಾಣಿ) ಸಮೂಹ ಸಂಸ್ಥೆಗಳ ನೂತನ ಕಾರ್ಖಾನೆಗಳ ಉದ್ಘಾಟನೆ, 75 ಸಾವಿರ ಟಿಸಿಡಿ ಕಬ್ಬು ನುರಿಸುವ 260 ಮೆ.ವ್ಯಾಟ್ ಸಹ ವಿದ್ಯುತ್, 26 ಲಕ್ಷ ಲೀ ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ & CO2 ಉತ್ಪಾದನೆಗಳ ವಿಸ್ತರಣೆ ಯೋಜನೆಗಳ ಭೂಮಿ ಪೂಜೆ ಹಾಗೂ ಅಡಿಗಲ್ಲು ನೆರವೇರಿಸಿದರು.
  • ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಇಂತಹ ಯೋಜನೆಗಳು ಯಾಕೆ ಜಾರಿಯಾಗಲಿಲ್ಲ ಎಂದು ವಾಗ್ದಾಳಿ ನಡೆಸಿದರು.
Amit Shah: ಚಾಲುಕ್ಯರ ನಾಡಲ್ಲಿ ಚಾಣಕ್ಯ: ಬಾದಾಮಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ! title=

ಬಾಗಲಕೋಟೆ: ಎರಡನೇ ದಿನದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.17ರಂದು ಜಿಲ್ಲೆಗೆ ಭೇಟಿ ನೀಡಿ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.

ಎಂ.ಅರ್.ಎನ್ (ನಿರಾಣಿ) ಸಮೂಹ ಸಂಸ್ಥೆಗಳ ನೂತನ ಕಾರ್ಖಾನೆಗಳ ಉದ್ಘಾಟನೆ, 75 ಸಾವಿರ ಟಿಸಿಡಿ ಕಬ್ಬು ನುರಿಸುವ 260 ಮೆ.ವ್ಯಾಟ್ ಸಹ ವಿದ್ಯುತ್, 26 ಲಕ್ಷ ಲೀ ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ & CO2 ಉತ್ಪಾದನೆಗಳ ವಿಸ್ತರಣೆ ಯೋಜನೆಗಳ  ಭೂಮಿ ಪೂಜೆ ಹಾಗೂ ಅಡಿಗಲ್ಲು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ನೆರವೇರಿಸಿದರು.

BJP: ಇಂದು ಸಂಜೆಯೇ ನೂತನ 7 ಸಚಿವರಿಗೆ ಖಾತೆ ಹಂಚಿಕೆ..!?

ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಸಾಯಿಪ್ರೀಯಾ ಶುಗರ್ಸ್ ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾರ್ಯಕ್ರಮದ ಆರಂಭದಲ್ಲಿ ಗೋ ಪೂಜೆ ನೆರವೇರಿಸಿದರು.

State Government: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೊಂದು 'ಶುಭ ಸುದ್ದಿ'..!

ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಇಂತಹ ಯೋಜನೆಗಳು ಯಾಕೆ ಜಾರಿಯಾಗಲಿಲ್ಲ ಎಂದು ವಾಗ್ದಾಳಿ ನಡೆಸಿದರು. ರೈತರ ಆದಾಯ ದ್ವಿಗುಣಗೊಳಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ಆದಾಯ ದ್ವಿಗುಣಗೊಳಿಸುತ್ತೇವೆ ಎಂದಾಗ ಕಾಂಗ್ರೆಸ್ ನಾಯಕರು ನಗುತ್ತಿದ್ದರು. ಈಗಾಗಲೇ ನಾವು ರೈತರ ಆದಾಯ ದ್ವಿಗುಣಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್ ರೈತರನ್ನು ಮುಂದಿಟ್ಟುಕೊಂಡು ಟೀಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು.

Amit Shah: ಸಿಎಂ ಯಡಿಯೂರಪ್ಪಗೆ 'ಗುಡ್ ನ್ಯೂಸ್' ನೀಡಿದ ಅಮಿತ್ ಶಾ!

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಕೃಷಿ ಸಚಿವ ಬಿ.ಸಿ.ಪಾಟೀಲ, ಮಹಿಳಾ & ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಮುರುಗೇಶ ನಿರಾಣಿ, ಸಂಸದ ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿಣಗಿ, ಸಿದ್ದೇಶ್ವರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕಾಣದ ಕನ್ನಡ : HD Kumarswamy ಕಿಡಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News