ಬೆಂಗಳೂರಿನ ಕೇಂದ್ರ ಭಾಗದಲ್ಲೇ ಕೇಂದ್ರ ಗೃಹ ಸಚಿವರ ಕಾರ್ಯಕ್ರಮ: ತಟ್ಟಲಿದೆ ಟ್ರಾಫಿಕ್ ಬಿಸಿ

ರಾಜ್ಯಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಇಂದು ಸಂಜೆ ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ  ಜರುಗಲಿರುವ ಖೋಲೊ ಇಂಡಿಯಾ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.

Written by - Yashaswini V | Last Updated : May 3, 2022, 11:00 AM IST
  • ಇಂದು ಸಂಜೆ ಕಂಠೀರವ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಸಮಾರೋಪ ಸಮಾರಂಭ
  • ಕಾರ್ಯಕ್ರಮ ದಲ್ಲಿ ಹಲವು ಸಚಿವರು ಹಾಗೂ ವಿವಿಧ ರಾಜ್ಯದ ಗಣ್ಯರು ಭಾಗವಸುವ ಹಿನ್ನಲೆ
  • ಕ್ರೀಡಾಂಗಣ ಸುತ್ತ ಇರುವ ಮಲ್ಯ ರಸ್ತೆ, ಕಸ್ತೂರಬಾ ರಸ್ತೆ , ರಾಜ ರಾಮ್ ಮೋಹನ್ ರಸ್ತೆ ಬಂದ್
ಬೆಂಗಳೂರಿನ ಕೇಂದ್ರ ಭಾಗದಲ್ಲೇ ಕೇಂದ್ರ ಗೃಹ ಸಚಿವರ ಕಾರ್ಯಕ್ರಮ: ತಟ್ಟಲಿದೆ ಟ್ರಾಫಿಕ್ ಬಿಸಿ  title=
Amit Shah Karnataka visit

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕೇಂದ್ರ ಭಾಗದಲ್ಲೇ ಕೇಂದ್ರ ಗೃಹ ಸಚಿವರ ಕಾರ್ಯಕ್ರಮ ಇರುವ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಮಂದಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.

ಇಂದು ಸಂಜೆ  ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ  ಜರುಗಲಿರುವ ಖೋಲೊ ಇಂಡಿಯಾ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾ ಆಗಮನ ಹಿನ್ನಲೆ ಕಂಠೀರವ ಸ್ಟೇಡಿಯಂ ‌ಸುತ್ತಮುತ್ತ ಇರುವ ರಸ್ತೆಗಳು ಸಂಪೂರ್ಣ ಬಂದ್ ಆಗಲಿದ್ದು ಸಿಲಿಕಾನ್ ಸಿಟಿ ಮಂದಿಗೆ ತಟ್ಟಲಿದೆ ಟ್ರಾಫಿಕ್ ಸಮಸ್ಯೆ ಕಾಡಲಿದೆ.

ಇದನ್ನೂ ಓದಿ- ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬೊಮ್ಮಯಿ ‌ಸರ್ಕಾರಕ್ಕೆ ಮೇಜರ್ ಸರ್ಜರಿ ಸಾಧ್ಯತೆ!

ವಾಸ್ತವವಾಗಿ, ಇಂದು ಸಂಜೆ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ರಾತ್ರಿಯೇ  ವಿಶೇಷ ವಿಮಾನ ಮೂಲಕ  ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಅವರು ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಇದಲ್ಲದೆ,  ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಹಲವು ಸಚಿವರು ಹಾಗೂ ವಿವಿಧ ರಾಜ್ಯದ ಗಣ್ಯರು ಭಾಗವಸುವ ಹಿನ್ನಲೆಯಲ್ಲಿ ಕ್ರೀಡಾಂಗಣ ಸುತ್ತ ಇರುವ ಮಲ್ಯ ರಸ್ತೆ, ಕಸ್ತೂರಬಾ ರಸ್ತೆ , ರಾಜ ರಾಮ್ ಮೋಹನ್ ರಸ್ತೆ ಬಂದ್ ಆಗಲಿದೆ. ಈ ಮಾರ್ಗವಾಗಿ  ಕ್ರೀಡಾಂಗಣಕ್ಕೆ ಆಗಮಿಸುವ ವಾಹನಗಳಿಗೆ ಮಾತ್ರ ಅವಕಾಶ ಅವಕಾಶ ಕಲ್ಪಿಸಲಾಗಿದೆ. 

ಇದನ್ನೂ ಓದಿ- ಎಂಇಎಸ್ ಕಿರಾತಕರ ಬಗ್ಗೆ ಬಿಜೆಪಿ ಸರ್ಕಾರ ಮೃದುದೋರಣೆ ತಾಳಿದೆ: ಎಚ್‍ಡಿಕೆ ಆರೋಪ

ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇಶದ ಮೂಲೆಮೂಲೆಗಳಿಂದ ಕ್ರೀಡಾ ಪಟುಗಳು ಆಗಮಿಸಲಿದ್ದಾರೆ. ಇದಲ್ಲದೆ,  ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳು ಸಹ ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.  ಈ ಹಿನ್ನಲೆಯಲ್ಲಿ ಏರ್ ಪೋರ್ಟ್ ರಸ್ತೆ, ನೃಪತುಂಗ ಮಾರ್ಗ, ಕೆ ಆರ್ ರೋಡ್ ರೇಸ್ ಕೋರ್ಸ್ ರಸ್ತೆ , ಮೆಜೆಸ್ಟಿಕ್ , ಕಾರ್ಪೊರೇಷನ್, ಅರಮನೆ ರೋಡ್ ಸೇರಿದಂತೆ ನಗರದ ಬಹುತೇಕ ರಸ್ತೆಗಳು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. 

ಇದಲ್ಲದೆ, ಕೇಂದ್ರ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಗಳು ಅದೇ ಮಾರ್ಗದಲ್ಲಿರುವ ಕಾರಣ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಇಂದು ವಾಹನ ಸವಾರರಿಗೆ ಸಂಚಾರ ಪೊಲೀಸರಿಂದ ಪ್ರತ್ಯೇಕ ಬದಲಿ ಮಾರ್ಗಕ್ಕೆ ವ್ಯವಸ್ಥೆ ಮಾಡಲಾಗಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News