ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ: ಸಿಎಂಗೆ ಕೇಂದ್ರ ಸಚಿವ ಎಚ್‌ಡಿ‌ಕೆ

Union Minister HD Kumaraswamy: ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. 

Written by - Yashaswini V | Last Updated : Jul 30, 2024, 01:30 PM IST
  • ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ!
  • ಆ Siddalogy ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ..
ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ: ಸಿಎಂಗೆ ಕೇಂದ್ರ ಸಚಿವ ಎಚ್‌ಡಿ‌ಕೆ  title=

HDK vs CM Siddaramaiah: ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ @siddaramaiah ನವರೇ.. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯ ಮೂಲಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ವಿರುದ್ಧ ಹರಿಹಾಯ್ದಿದ್ದಾರೆ. 

ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ 'ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?' 'ಸುಳ್ಳು ಸಂಶೋಧಕ ಸಿದ್ದರಾಮಯ್ಯ'ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (Union Minister HD Kumaraswamy) ಅವರು ಕಿಡಿಕಾರಿದ್ದಾರೆ. 

ಇದನ್ನೂ ಓದಿ- ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

'ಮೂಡಾ (MUDA) ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ' ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ 'ಶರಪಂಜರ' ಸೃಷ್ಟಿಸುತ್ತಿದ್ದಾರೆ!

ಎಚ್.ಡಿ. ಕುಮಾರಸ್ವಾಮಿ (H.D. Kumaraswamy) ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ  ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ- ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ Siddalogy ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ #Siddalogy ನನಗೆ ಚೆನ್ನಾಗಿಯೇ ಗೊತ್ತಿದೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News