ರಾಮನಗರ (ಬಿಡದಿ): ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು.
ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು ಅವರು. ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರಿಂದ ಮೆಟ್ರೋದಲ್ಲಿ ಪ್ರಯಾಣ
ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಹೆಚ್ಡಿಕೆ ಡಿಸಿಎಂ ಡಿಕೆಶಿಗೆ ನೇರ ಸವಾಲು ಹಾಕಿದರು.
ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆಡಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಹೇಳಿದರು ಕುಮಾರಸ್ವಾಮಿ ಅವರು.
ಇದನ್ನೂ ಓದಿ:ರಾಮನಗರಕ್ಕೆ ಶಾಸಕರಾಗಿ ಚೊಂಬು ಕೊಟ್ಟಿದ್ದಾರೆ
ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೇಯದಾಗಬೇಕು. ನಾನು ಅಧಿಕಾರ ಕೇಳಿ ನಿಮ್ಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದಿರಿ ಶಿವಕುಮಾರ್. ನೀವು ಮರೆತು ಹೋಗಿದ್ದೀರಿ, ಒಮ್ಮೆ ನೆನಪುವಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಟಾಂಗ್ ಕೊಟ್ಟರು.
ಡಾ.ಮಂಜುನಾಥ್ ಅವರು ಡಾಕ್ಟರ್ ಕೆಲಸ ಮಾತ್ರ ಮಾಡ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರಿಯುತ್ತಿದೆ. ಅವರ ಬಗ್ಗೆಯೂ ಶಿವಕುಮಾರ್ ಮಾತಾಡಿದ್ದಾರೆ. ಅವರ ಹತಾಶೆ, ನಿರಾಶೆ ನನಗೆ ಅರ್ಥ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.
ಇದನ್ನೂ ಓದಿ: 4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಗೃಹ ಸಚಿವರಾಗಿ ಒಬ್ಬ ದಲಿತ ಪೊಲೀಸ್ ಅಧಿಕಾರಿ ರಕ್ಷಣೆ ಮಾಡಲು ಪರಮೇಶ್ವರ್ ಅವರಿಂದ ಆಗಲಿಲ್ಲ. ಅಲ್ಲಿಗೆ ಅವರು ಇಪ್ಪತ್ತು ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಂಡಿದ್ದಾರೆ. ಈಗ ಅವರು ಅಲ್ಲೇ ಉಳಿಯಲು ಮೂವತ್ತು ಲಕ್ಷ ಕೊಡಬೇಕಂತೆ. ಒಬ್ಬ ಪೋಲಿಸ್ ಅಧಿಕಾರಿಯನ್ನೇ ರಕ್ಷಣೆ ಮಾಡಲಾಗದ ಈ ಸರ್ಕಾರಕ್ಕೆ ಜನರ ರಕ್ಷಣೆ ಮಾಡಲು ಸಾಧ್ಯವೇ? ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದರು.
ರಾಜಕೀಯ ನಿವೃತ್ತಿಯ ಸವಾಲು ಹಾಕಿದ HDK : ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಬಿಡಿಸಿದರು ಕೇಂದ್ರ ಸಚಿವ ಕುಮಾರಸ್ವಾಮಿ ಅವರು.
ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.
ಇದನ್ನೂ ಓದಿ: ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ
ಸರ್ಕಾರದ ಬಗ್ಗೆ ನಮಗೆ ಅಸೂಯೆ ಇಲ್ಲ : ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೀತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿತ್ತು ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟಾಂಗ್ ಕೊಟ್ಟರು ಅವರು.
ಮೂಡಾ ಬಗ್ಗೆ ದಾಖಲೆ ಸಮೇತ ಮಾತನಾಡಿದ್ದೇವೆ : ಮೂಡಾ ಬಗ್ಗೆ ನಾನು, ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತನಾಡಿದೇವೆ. ಮೈಸೂರು ನಗರದ ಉಸ್ತುವಾರಿಯನ್ನು ಸಿಎಂ ಅವರೇ ವಹಿಸಿಕೊಂಡಿದ್ದಾರೆ. ಸಿಎಂ ತಮ್ಮ ಪತ್ನಿ ಹೆಸರಲ್ಲಿ 15 ಸೈಟು ಪಡೆಯಲು ನಮ್ಮ ವಿರೋಧ ಇಲ್ಲ. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಸೈಟು ಪಡೆದಿದ್ದಾರೆ. ಇಲ್ಲಿ ನಿಂಗ, ಜವರ, ದೇವರಾಜ, ದಲಿತ ಅನ್ನೋ ಪ್ರಶ್ನೆ ಇಲ್ಲ. ನಕಲಿ ದಾಖಲೆ ಸೃಷ್ಟಿ 15 ಸೈಟುಗಳನ್ನು ತಗೊಂಡಿದ್ದಾರೆ. ಇದನ್ನು ಸಿಎಂ ಕಾನೂನು ಬಾಹಿರವಾಗಿ ತಗೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.
ಡಿಕೆಶಿ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ; ಏಕವಚನ ನನಗೂ ಬರುತ್ತದೆ : ಡಿಸಿಎಂ ಡಿಕೆ ಶಿವಕುಮಾರ್ ಅವರು ಏನು ಪ್ರಶ್ನೆಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಬಗ್ಗೆ, ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದು ಎಚ್ಚರಿಕೆ ಕೊಟ್ಟರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.