ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ಕೊರೊನಾ ಧೃಢ

ಕೇಂದ್ರ ರೈಲ್ವೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದರೂ ಆಗಿರುವ ಸುರೇಶ್ ಅಂಗಡಿ ಅವರಿಗೆ ಕೊರೊನಾ ಇರುವುದು ಧೃಢಪಟ್ಟಿದೆ.ಈ ವಿಷಯವನ್ನು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆ ಮೂಲಕ ಪ್ರಕಟಿಸಿದ್ದಾರೆ. 

Last Updated : Sep 11, 2020, 06:34 PM IST
ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ಕೊರೊನಾ ಧೃಢ  title=
Photo Courtsey : Twitter

ಬೆಂಗಳೂರು: ಕೇಂದ್ರ ರೈಲ್ವೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದರೂ ಆಗಿರುವ ಸುರೇಶ್ ಅಂಗಡಿ ಅವರಿಗೆ ಕೊರೊನಾ ಇರುವುದು ಧೃಢಪಟ್ಟಿದೆ.ಈ ವಿಷಯವನ್ನು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆ ಮೂಲಕ ಪ್ರಕಟಿಸಿದ್ದಾರೆ. 

'ನಾನು Covid19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.

ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗಡಿ ಹೇಳಿದರು. ಕಳೆದ ಕೆಲವು ದಿನಗಳಲ್ಲಿ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಿ ಪರೀಕ್ಷೆಗೆ ಒಳಪಡಿಸುವಂತೆ ಅವರು ವಿನಂತಿಸಿದರು.

Trending News