ಬಿಟ್ಟಿ ಭಾಗ್ಯ ಘೋಷಿಸಿ ನಾಡಿನ ಖಜಾನೆ ಬರಿದು ಮಾಡೋ ಕಾಂಗ್ರೆಸ್: ಪ್ರಲ್ಹಾದ ಜೋಶಿ

Union Minister Pralhad Joshi: ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. 

Written by - Prashobh Devanahalli | Last Updated : May 25, 2024, 12:20 PM IST
  • ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ
  • ದೇಶದ ಅಭಿವೃದ್ಧಿಗಾಗಿ ಯಾವ ಯೋಚನೆ, ಯೋಜನೆಯೂ ಕಾಂಗ್ರೆಸ್ ಬಳಿ ಇಲ್ಲ
  • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ
ಬಿಟ್ಟಿ ಭಾಗ್ಯ ಘೋಷಿಸಿ ನಾಡಿನ ಖಜಾನೆ ಬರಿದು ಮಾಡೋ ಕಾಂಗ್ರೆಸ್: ಪ್ರಲ್ಹಾದ ಜೋಶಿ  title=

ಹುಬ್ಬಳ್ಳಿ: ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಂದ ಬಳಿಕ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶವನ್ನು ದೋಚಿದೆ ಅಷ್ಟೇ. ಈಗ ನೋಡಿದರೆ ಆ ಭಾಗ್ಯ..ಈ ಭಾಗ್ಯ ಎಂದು ಏನೆಲ್ಲಾ ಘೋಷಣೆ ಮಾಡುತ್ತ ದೇಶದ ಖಜಾನೆ ಬರಿದು ಮಾಡಲು ಹೊರಟಿದೆ ಎಂದು ಹರಿ ಹಾಯ್ದರು.

ಇದನ್ನೂ ಓದಿ:ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು... ಠಾಣೆಯನ್ನು ಧ್ವಂಸಗೊಳಿಸಿದ ಕುಟುಂಬಸ್ಥರು

ದೇಶದ ನಾಗರಿಕರಿಗೆ ನಿಜವಾಗಿಯೂ ಬೇಕಾಗಿರುವುದು ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ. ಆದರೆ, ಇದಕ್ಕೆ ಪೂರಕ ಮೂಲ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಯಾವ ಯೋಜನೆಯೂ ಕಾಂಗ್ರೆಸ್ಸಿಗರಲ್ಲಿ ಇಲ್ಲ ಎಂದು ಜೋಶಿ ಹೇಳಿದರು.

ದೇಶದ ಅಭಿವೃದ್ಧಿಗಾಗಿ ಯಾವ ಯೋಚನೆ, ಯೋಜನೆಯೂ ಕಾಂಗ್ರೆಸ್ ಬಳಿ ಇಲ್ಲ. ಇಂಥವರ ಕೈಗೆ ಅಧಿಕಾರ ಹೋದರೆ ಜನರು ಅಧೋಗತಿ ತಲುಪುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸದ್ಯ ಕಾಂಗ್ರೆಸ್ ಆಡಳಿತದಲ್ಲಿ ಇರುವ ಕರ್ನಾಟಕವೂ ಶ್ರೀಲಂಕ ಮತ್ತು ಕೇರಳ ಕಂಡಂಥ ದುಸ್ಥಿತಿಯನ್ನೇ ಕಾಣಬೇಕಾದೀತು. ಜನತೆ ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು.

ಬಿಜೆಪಿ ಬೆಂಬಲಕ್ಕೆ ಕರೆ: ಕಳೆದ ಹತ್ತು ವರ್ಷದಿಂದ ಬಿಜೆಪಿ ಆಡಳಿತದಲ್ಲಿ ಸಮೃದ್ಧ ಭಾರತವನ್ನು ಸೃಷ್ಟಿಸಲಾಗುತ್ತಿದೆ. ಸಮರ್ಥ, ಸಶಕ್ತ ಭಾರತ ನಿರ್ಮಾಣಕ್ಕಾಗಿ ಮತ್ತೆ ಮತ್ತೆ ಬಿಜೆಪಿಯನ್ನೇ ಅಧಿಕಾರಕ್ಕೆ ತರಬೇಕು ಎಂದು ಪದವೀಧರ ಮತದಾರರಲ್ಲಿ ಪ್ರಲ್ಹಾದ ಜೋಶಿ ಬೆಂಬಲ ಕೋರಿದರು.

ಇದನ್ನೂ ಓದಿ:COMEDK UGET Result 2024 : ಕಾಮೆಡ್‌-ಕೆ ಫಲಿತಾಂಶ ಪ್ರಕಟ.. ರಿಸಲ್ಟ್ ಚೆಕ್‌ ಮಾಡುವ ವಿಧಾನ, ಕೌನ್

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ಕೃಷ್ಣ ನಾಯ್ಕ, ಮಾಜಿ ಸಚಿವ ಆನಂದ ಸಿಂಗ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ, ಎಸ್ಟಿ ಮೋರ್ಚಾ ಪ್ರಮುಖರಾದ ಬಂಗಾರು ಹನಮಂತ, ಹಾಗೂ ಪಕ್ಷದ ಪ್ರಮುಖರು ಮುಖಂಡರು,  ಕಾರ್ಯಕರ್ತರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News