BIG News: ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ

ಮಾಜಿ ರಾಜ್ಯಪಾಲ ವಜುಬಾಯಿ ವಾಲಾ  ಅವರ ಅವಧಿ ಮುಕ್ತಾಯದ ಹಿನ್ನೆಲೆ  ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ  ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

Written by - Zee Kannada News Desk | Last Updated : Jul 6, 2021, 04:11 PM IST
  • ಕೇಂದ್ರ ಸಂಪುಟ ವಿಸ್ತರಣೆ ಮಾತುಕತೆ ಮಧ್ಯೆ ಕರ್ನಾಟಕ ರಾಜ್ಯಪಾಲರ ನೇಮಕ
  • ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕ
  • ಕರ್ನಾಟಕ ಸೇರಿ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಿಸಿ ರಾಷ್ಟ್ರಪತಿ ಭವನದ ಆದೇಶ
BIG News: ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ title=
ಕರ್ನಾಟಕ ಸೇರಿ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ (photo zee news)

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ (Thaawarchand Gehlot) ನೇಮಕಗೊಂಡಿದ್ದಾರೆ.  ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಮಂಗಳವಾರ ಆದೇಶ ಹೊರಡಿಸಿದೆ. 

ಮಾಜಿ ರಾಜ್ಯಪಾಲ ವಜುಬಾಯಿ ವಾಲಾ (VajubhaiVala) ಅವರ ಅವಧಿ ಮುಕ್ತಾಯದ ಹಿನ್ನೆಲೆ  ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ  (Karnataka governor) ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ 73 ವರ್ಷದ ಗೆಹ್ಲೋಟ್ ಪ್ರಮುಖ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದಾರೆ. 

ಇದನ್ನೂ ಓದಿ :  ಜುಲೈ 19 ರಿಂದ 22ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಹಾಗೂ ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿ ಗೆಹ್ಲೋಟ್ ಸೇವೆ ಸಲ್ಲಿಸಿದ್ದಾರೆ. ಕೇಂದ್ರದ ಕ್ಯಾಬಿನೆಟ್ ವಿಸ್ತರಣೆ (Cabinet expansion) ಮಾತುಕತೆ ಮಧ್ಯೆಯೇ ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿರುವ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. 

ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಪುಟ ವಿಸ್ತರಣೆ ಸಂಬಂಧ ನಡೆಯಲಿರುವ ಬಹುನಿರೀಕ್ಷಿತ ಸಭೆಗೆ ಮುನ್ನವೇ ಕರ್ನಾಟಕ ಸೇರಿ 8 ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಅವರು ಅಂಕಿತ ಹಾಕಿದ್ದಾರೆ. 

ಇದನ್ನೂ ಓದಿ: Heavy Rainfall : ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಪ್ರಮುಖವಾಗಿ ಹಿಮಾಚಲ ಪ್ರದೇಶ ರಾಜ್ಯಪಾಲರಾಗಿದ್ದ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣದ ರಾಜ್ಯಪಾಲರಾಗಿ, ಮಿಜೋರಾಂ ರಾಜ್ಯಪಾಲರಾಗಿದ್ದ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರನ್ನು ಗೋವಾ ರಾಜ್ಯಪಾಲರಾಗಿ, ತ್ರಿಪುರಾದ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಜಾರ್ಖಂಡ್‌ಗೆ ಹಾಗೂ  ಹರಿಯಾಣದ ರಾಜ್ಯಪಾಲರಾಗಿದ್ದ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ತ್ರಿಪುರಾದ ರಾಜ್ಯಪಾಲರಾಗಿ ಬದಲಾಯಿಸಲಾಗಿದೆ.

ಇದಲ್ಲದೆ ಮಿಜೋರಾಂ ರಾಜ್ಯಪಾಲರಾಗಿ ಹರಿಬಾಬು ಕಂಭಂಪತಿ, ಮಧ್ಯಪ್ರದೇಶದ ರಾಜ್ಯಪಾಲರಾಗಿ ಮಂಗುಭಾಯ್ ಛಗಂಬಾಯ್ ಪಟೇಲ್ ಹಾಗೂಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರನ್ನು ನೇಮಿಸಲಾಗಿದೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News