ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಇಂದು ಸಿಎಂ ಯಡಿಯೂರಪ್ಪ(BS Yediyurappa) ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ(ಜೂ.14) ಹಂತ ಹಂತವಾಗಿ ನಿರ್ಬಂಧ ತೆರವು ಮಾಡುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಪ್ರಯಾಣಿಕರ ಸುರಕ್ಷತೆಗಾಗಿ ಕೆ.ಎಸ್.ಆರ್.ಟಿ.ಸಿ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ
ಕೊರೋನಾ ಎರಡನೇ ಅಲೆ ಪ್ರಭಾವ ತಗ್ಗುತ್ತಿದ್ದರೂ ಕೆಲವು ಜಿಲ್ಲೆಗಳಲ್ಲಿ ಗಂಭೀರ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಏಕಸ್ವರೂಪದ 'ಅನ್ ಲಾಕ್'(Unlock) ಜಾರಿಗೊಳಿಸುವುದು ಅನುಮಾನ. ತಜ್ಞರ ಸಲಹೆ ಪ್ರಕಾರ ಹೊಸ ಪ್ರಕರಣಗಳು 5 ಸಾವಿರಕ್ಕಿಂತ ಕಡಿಮೆ ಹಾಗೂ ಪಾಸಿಟಿವಿಟಿ ದರ ಶೇ. 5ಕ್ಕಿಂತಲೂ ಕಡಿಮೆ ಇದ್ದರೆ ಮಾತ್ರ ಅನ್ ಲಾಕ್ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪ ಬೇಡದ ಕೂಸಾಗಿದ್ದಾರೆ-ಸಿದ್ಧರಾಮಯ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.