ರಾಜಕೀಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಬಳಕೆ ಅಕ್ಷಮ್ಯ: ಬಿಜೆಪಿ ವಿರುದ್ಧ ಹೆಚ್ಡಿಕೆ ಕಿಡಿ

ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

Written by - Bhavishya Shetty | Last Updated : Nov 9, 2022, 05:18 PM IST
    • ಬಿಜೆಪಿ ನಾಯಕರಿಂದ ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ
    • ಪ್ರತಿಮೆ ಸ್ಥಾಪನೆ ಮಾಡಿ ಒಕ್ಕಲಿಗರ ಮತ ಸೆಳೆಯಬಹುದು ಎಂಬುದು ಬಿಜೆಪಿಯವರು ಲೆಕ್ಕಾಚಾರ
    • ಬಿಜೆಪಿ ವಿರುದ್ಧ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ರಾಜಕೀಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಬಳಕೆ ಅಕ್ಷಮ್ಯ: ಬಿಜೆಪಿ ವಿರುದ್ಧ ಹೆಚ್ಡಿಕೆ ಕಿಡಿ title=
Nadaprabhu Kempegowda

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ  ಟೀಕಿಸಿದರು.

ಇದನ್ನೂ ಓದಿ: ಕರ್ನಾಟಕ–ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಪ್ರತಿಮೆ ಸ್ಥಾಪನೆ ಮಾಡಿ ಒಕ್ಕಲಿಗರ ಮತ ಸೆಳೆಯಬಹುದು ಎಂದು ಬಿಜೆಪಿಯವರು ಲೆಕ್ಕಾಚಾರ ಮಾಡಿದ್ದಾರೆ. ಬಿಜೆಪಿ ನಾಯಕರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಆ ಭ್ರಮೆಯಿಂದ ಹೊರ ತರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.

ಕೆಂಪೇಗೌಡ ಪ್ರತಿಮೆ‌ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಇದಕ್ಕೆ ನಾನು ಹೆಚ್ಚು ಮಹತ್ವ ಕೊಡಲು ಹೋಗುವುದಿಲ್ಲ ಎಂದರು.

ನರೇಂದ್ರ ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರುತ್ತದೆಂದು ಬಿಜೆಪಿಯವರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಅದರಿಂದ ಹೊರ ತರುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: "ಧರ್ಮ, ಜಾತಿ ಬಿಟ್ಟರೆ ರಾಷ್ಟ್ರೀಯ ಪಕ್ಷಗಳಿಗೆ ಬೇರೆ ವಿಷಯ ಇಲ್ಲ"

ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದೇ ರೀತಿ ನಿರುದ್ಯೋಗ ಸಮಸ್ಯೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಮಾಡಿದ್ದಾರೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News