ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ.ಸೋಮಣ್ಣ ನೇಮಕ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.  

Last Updated : Aug 23, 2019, 10:28 AM IST
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ.ಸೋಮಣ್ಣ ನೇಮಕ title=
Photo Courtesy: Youtube

ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮಾನ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಗುರುವಾರ ಮೊದಲ ಹಂತದ ಗಜಪಯನ ಆರಂಭವಾಯಿತು. ಗಜ ಪಯಣದ ಸಂದರ್ಭದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ ಎರಡು ಎರಡು ಬಾರಿ ಗಜ ಪಯಣಕ್ಕೆ ಬಿಜೆಪಿಯ ನಾಯಕರು ಚಾಲನೆಗೊಳಿಸಿದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದೇ ಇರುವುದೇ ಇದಕ್ಕೆಲ್ಲಾ ಕಾರಣ ಎಂದು ಕೆಲವರು ಆರೋಪಿಸಿದ್ದರು.

ಇದೆಲ್ಲದರ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಇದೀಗ ಕರ್ನಾಟಕ ಸರ್ಕಾರ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿದೆ. 

Trending News