VIDEO: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದಲ್ಲಿ ಶಾಸಕ ರೇಣುಕಾಚಾರ್ಯ ಡ್ಯಾನ್ಸ್!

ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಡ್ಯಾನ್ಸ್ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.

Last Updated : Jul 23, 2019, 11:28 PM IST
VIDEO: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದಲ್ಲಿ ಶಾಸಕ ರೇಣುಕಾಚಾರ್ಯ ಡ್ಯಾನ್ಸ್! title=

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿ ಶಾಸಕರು ತಂಗಿರುವ ಬೆಂಗಳೂರಿನ ರಮಡಾ ಹೋಟೆಲ್ ಹೊರಗೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಡೋಲು ಬಡಿದು ಸಂಭ್ರಮಿಸಿದರು.

ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಡ್ಯಾನ್ಸ್ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. 

ಮತ್ತೊಂದೆಡೆ ಹೋಟೆಲ್ ಒಳಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಪ್ರಗತಿಯಲ್ಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಸಭೆಯಲಿ ಭಾಗಿಯಾಗಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡನೆಯ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.

Trending News