Video: ಅಪಘಾತಕ್ಕೀಡಾಗಿದ್ದ ಕಾರಿನಿಂದ ಪ್ರಯಾಣಿಕರನ್ನು ರಕ್ಷಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗದಿಂದ ಕಾರ್ಕಳಕ್ಕೆ ಸಂಚರಿಸುತ್ತಿದ್ದ ಕಾರು ಕುಡುಮಲ್ಲಿಗೆ ಸಮೀಪ ಅಪಘಾತಕ್ಕೀಡಾಗಿದ್ದು, ಸಮಯಕ್ಕೆ ಸರಿಯಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೆರವಿನಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Written by - Yashaswini V | Last Updated : Jan 4, 2023, 11:31 AM IST
  • ಕಾರು ಅಪಘಾತದಲ್ಲಿ ಪ್ರಯಾಣಿಕರನ್ನು ರಕ್ಷಿಸಿದ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ
  • ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೆರವಿನಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು
  • ಘಟನೆಗೆ ಸಂಬಂಧಿಸಿದ ವಿಡಿಯೋ ಇಲ್ಲಿದೆ...
Video: ಅಪಘಾತಕ್ಕೀಡಾಗಿದ್ದ ಕಾರಿನಿಂದ ಪ್ರಯಾಣಿಕರನ್ನು ರಕ್ಷಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ title=
Home Minister Araga Jnanendra

ಶಿವಮೊಗ್ಗ:  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಬಳಿ ಅಪಘಾತಕ್ಕೀಡಾಗಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ರಕ್ಷಿಸಿದ್ದಾರೆ. 

ಶಿವಮೊಗ್ಗದಿಂದ ಕಾರ್ಕಳಕ್ಕೆ ಸಂಚರಿಸುತ್ತಿದ್ದ ಕಾರು ಕುಡುಮಲ್ಲಿಗೆ ಸಮೀಪ ಅಪಘಾತಕ್ಕೀಡಾಗಿದ್ದು, ಸಮಯಕ್ಕೆ ಸರಿಯಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೆರವಿನಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ- ಅಳಿಯನನ್ನೇ ಸರಪಳಿಯಲ್ಲಿ ಕಟ್ಟಿ ಹಾಕಿ ಅಮಾನುಷ ಕೃತ್ಯ

ಕಾರು ಅಪಘಾತದಲ್ಲಿ ಪ್ರಯಾಣಿಕರನ್ನು ರಕ್ಷಿಸಿದ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾರಿನಲ್ಲಿದ್ದ ವಿದ್ಯಾರ್ಥಿಗೆ  ಪರೀಕ್ಷೆ ಬರೆಯಲು ಕಾರ್ಕಳಕ್ಕೆ ತೆರಳಲು ಸಹ ನೆರವಾಗಿದ್ದು ಇತರರಿಗೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ- ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪ್ರಥಮ ಮುದ್ರಣ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

ಈ ಘಟನೆ ಕುರಿತಂತೆ ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಶಿವಮೊಗ್ಗಕ್ಕೆ ಹೋಗುವ ವೇಳೆ,‌ ಪ್ರಯಾಣಿಕರ ಜೊತೆ ಮಾತನಾಡಲಾಯಿತು. ಕಾರನ್ನು ಎಲ್ಲರ ಸಹಾಯದಿಂದ ಮೇಲೆತ್ತಿ,‌ ಕಾರಿನಲ್ಲಿದ್ದ  ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಕಾರ್ಕಳಕ್ಕೆ ತೆರಳಲು ನೆರವಾಗಲಾಯಿತು ಎಂದು ಬರೆದುಕೊಂಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Android Link - https://bit.ly/3hDyh4G

 

Trending News