Watch: ತಮ್ಮೂರಿನ ಜಾತ್ರೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಸ್ಟೆಪ್ಸ್..!

ಮೈಸೂರು ಜಿಲ್ಲೆಯಲ್ಲಿರುವ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

Written by - Zee Kannada News Desk | Last Updated : Mar 25, 2022, 01:37 AM IST
  • ನಮ್ ಮನೆ ದೇವ್ರು ಸಿದ್ದರಾಮೇಶ್ವರ, ನಮ್ ಅಪ್ಪನ್ ಹೆಸ್ರು ಸಿದ್ದರಾಮೇಗೌಡ, ನಮ್ ಊರ್ ಹೆಸ್ರು ಸಿದ್ದರಾಮನಹುಂಡಿ, ನಮ್ ಮನೆ ದೇವ್ರು ಸಿದ್ದರಾಮೇಶ್ವರ
Watch: ತಮ್ಮೂರಿನ ಜಾತ್ರೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಸ್ಟೆಪ್ಸ್..!  title=
Photo Courtesy: Twitter

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿರುವ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಇದೇ ವೇಳೆ ಜಾತ್ರೆಯ ಸಂಭ್ರಮದಲ್ಲಿ ಪಾಲ್ಗೊಂಡ ಸಿದ್ಧರಾಮಯ್ಯನವರು ಗ್ರಾಮಸ್ಥರೊಂದಿಗೆ ನೃತ್ಯಕ್ಕಾಗಿ ಹೆಜ್ಜೆ ಹಾಕಿದ್ದು ಎಲ್ಲರ ಗಮನ ಸೆಳೆಯಿತು.

ಬುಧುವಾರದಂದು ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯನವರು (Siddaramaiah) ಮಾಧಸ್ವಾಮಿ ಅವರಿಗೆ ಪ್ರತಿಕ್ರಿಯಿಸುತ್ತಾ 'ನಮ್ ಮನೆ ದೇವ್ರು ಸಿದ್ದರಾಮೇಶ್ವರ, ನಮ್ ಅಪ್ಪನ್ ಹೆಸ್ರು ಸಿದ್ದರಾಮೇಗೌಡ, ನಮ್ ಊರ್ ಹೆಸ್ರು ಸಿದ್ದರಾಮನಹುಂಡಿ, ನಮ್ ಮನೆ ದೇವ್ರು ಸಿದ್ದರಾಮೇಶ್ವರ; ಎಂದು ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News