ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ರೂ.50 ಲಕ್ಷ ಪ್ರೋತ್ಸಾಹ ಧನ ಮಂಜೂರು

2023-24ನೇ ಆರ್ಥಿಕ ಸಾಲಿನ ಆಯವ್ಯಯದ ಭಾಷಣದಲ್ಲಿ ಅತ್ಯುತ್ತಮ ಸಾಧನೆ ಮಾಡುವ ರಾಜ್ಯ ವಿಶ್ವವಿದ್ಯಾಲಯಗಳಿಗೆ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರು. ಆಡಳಿತ ವ್ಯವಸ್ಥೆ ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕ ಮಾನದಂಡಗಳನ್ನು ನೀಡಿ ಮೌಲ್ಯಮಾಪನ ನಡೆಸಲು ಸಮಿತಿಯೊಂದನ್ನು ರಚಿಸಲಾಗಿತ್ತು.

Written by - Zee Kannada News Desk | Last Updated : Mar 6, 2024, 11:01 PM IST
  • ಉತ್ತಮ ಆಡಳಿತ ನೀಡುತ್ತಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನಕ್ಕೆ ಉಪಾಧ್ಯಕ್ಷರು, ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು.
  • ಅಂತಿಮವಾಗಿ ಅತ್ಯುತ್ತಮ ಸಾಧನೆ ತೋರುತ್ತಿರುವ ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿ ಸಮಿತಿಯು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.
 ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ರೂ.50 ಲಕ್ಷ ಪ್ರೋತ್ಸಾಹ ಧನ ಮಂಜೂರು title=

ಬಳ್ಳಾರಿ: ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರವು 50 ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿದೆ.

2023-24ನೇ ಆರ್ಥಿಕ ಸಾಲಿನ ಆಯವ್ಯಯದ ಭಾಷಣದಲ್ಲಿ ಅತ್ಯುತ್ತಮ ಸಾಧನೆ ಮಾಡುವ ರಾಜ್ಯ ವಿಶ್ವವಿದ್ಯಾಲಯಗಳಿಗೆ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರು. ಆಡಳಿತ ವ್ಯವಸ್ಥೆ ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕ ಮಾನದಂಡಗಳನ್ನು ನೀಡಿ ಮೌಲ್ಯಮಾಪನ ನಡೆಸಲು ಸಮಿತಿಯೊಂದನ್ನು ರಚಿಸಲಾಗಿತ್ತು.

ಒಟ್ಟು 7 ವಿವಿಧ ವರ್ಗಗಳಲ್ಲಿ ಉತ್ತಮ ಸಾಧನೆ ತೋರುವ ವಿಶ್ವವಿದ್ಯಾಲಯಗಳಿಗೆ ಒಟ್ಟು 350 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿತ್ತು. ಇದರಲ್ಲಿ ‘ಪಾಲುದಾರರ ಸಂಭಾಷಣೆ’ (ಸ್ಟೇಕ್‍ಹೋಲ್ಡರ್ಸ್ ಕನ್ವರ್ಷೇಶನ್) ವಿಭಾಗದಲ್ಲಿ ವಿಶ್ವವಿದ್ಯಾಲಯವು ಒಟ್ಟು 71 ಅಂಕಗಳನ್ನು ಕಲೆ ಹಾಕಿ ಅಗ್ರ ಸ್ಥಾನ ಪಡೆದು ಸಹಾಯಧನ ಪಡೆಯಲು ಅರ್ಹತೆ ಹೊಂದಿತ್ತು.

ವಿಶ್ವವಿದ್ಯಾಲಯದ ಚಟುವಟಿಕೆಗಳ ಕುರಿತು ನಿರಂತರವಾಗಿ ವಿದ್ಯಾರ್ಥಿಗಳಿಂದ ಪ್ರತಿಕ್ರಿಯೆ ಸಂಗ್ರಹಿಸುವುದು, ಹಳೆ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಆಯೋಜಿಸುವುದು ಮತ್ತು ಪ್ರತಿಕ್ರಿಯೆ ಪಡೆಯುವುದು, ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಯಿಂದ ಸುಧಾರಣಾ ಕ್ರಮಗಳ ಕುರಿತು ನಿರಂತರವಾಗಿ ಸಲಹೆಗಳನ್ನು ಸಂಗ್ರಹಿಸುವುದು, ಉದ್ಯಮ ಸಂಸ್ಥೆಗಳೊಂದಿಗೆ ಹಾಗೂ ಉದ್ಯಮಶೀಲ ವ್ಯಕ್ತಿಗಳನ್ನು ವಿಶ್ವವಿದ್ಯಾಲಯದ ಪಠ್ಯ ರಚನಾ ಸಮಿತಿಯಲ್ಲಿ ವಿಶೇಷ ಸದಸ್ಯರಾಗಿ ಅವಕಾಶ ನೀಡಿರುವುದು, ಸ್ಥಳೀಯ ಆಡಳಿತದ ಜೊತೆಗೆ ಕೋವಿಡ್-19ರ ಬಿಕ್ಕಟ್ಟಿನ ಸಂದರ್ಭದಲ್ಲಿ ಕೈಜೋಡಿಸಿ ನೆರವಿನ ಹಸ್ತ ಒದಗಿಸಿರುವುದು, ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುವ ಮಹತ್ತರ ಕಾರ್ಯ, ಸಿಬ್ಬಂದಿಯ ಮಕ್ಕಳ ಪೋಷಣೆಗೆ ಡೇ ಕೇರ್ ಸೆಂಟರ್ ಸೇರಿದಂತೆ ಹತ್ತು-ಹಲವು ಯೋಜನೆಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತ ಸಾಗಿರುವ ವಿಶ್ವವಿದ್ಯಾಲಯಕ್ಕೆ ಇದೀಗ ಸರ್ಕಾರದಿಂದ ದೊರೆತಿರುವ ಪ್ರೋತ್ಸಾಹಧನ ಮತ್ತಷ್ಟು ಉತ್ತಮ ಯೋಜನೆಗಳಿಗೆ ಮುನ್ನುಡಿ ಬರೆಯಲು ಪ್ರೇರೇಪಿಸಿದೆ.

ಇದನ್ನೂ ಓದಿ: Koppal : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತಮ ಆಡಳಿತ ನೀಡುತ್ತಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನಕ್ಕೆ ಉಪಾಧ್ಯಕ್ಷರು, ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಕಳೆದ ತಿಂಗಳ 29ರಂದು ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಸಭೆಯಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಪ್ರಸ್ತಾವನೆಗಳನ್ನು ಮೌಲ್ಯಮಾಪನಕ್ಕೊಳಪಡಿಸಿ ಅಂತಿಮವಾಗಿ ಅತ್ಯುತ್ತಮ ಸಾಧನೆ ತೋರುತ್ತಿರುವ ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿ ಸಮಿತಿಯು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

ಪ್ರೋತ್ಸಾಹಧನ ಪಡೆದಿರುವ ಮತ್ತಷ್ಟು ವಿಶ್ವವಿದ್ಯಾಲಯಗಳೆಂದರೆ ಉತ್ತಮ ಪರೀಕ್ಷಾ ವಿಧಾನಕ್ಕೆ ಬೆಂಗಳೂರು ವಿಶ್ವವಿದ್ಯಾಲಯ (85 ಅಂಕ), ಉತ್ತಮ ಉದ್ಯೋಗವಕಾಶ ಒದಗಿಸುತ್ತಿರುವುದಾಕ್ಕಾಗಿ ಮೈಸೂರು ವಿಶ್ವವಿದ್ಯಾಲಯ (80 ಅಂಕ), ಸಂಲಗ್ನಿತ ಕಾಲೇಜುಗಳೊಡನೆ ಉತ್ತಮ ಬಾಂಧವ್ಯಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (76 ಅಂಕ), ಇ-ಆಡಳಿತದ ಸಮರ್ಪಕ ಬಳಕೆಗಾಗಿ ಮಂಗಳೂರು ವಿಶ್ವವಿದ್ಯಾಲಯ (73 ಅಂಕ), ಸಿಬ್ಬಂದಿ ಸುಧಾರಣೆ ಕಾರ್ಯಕ್ರಮಕ್ಕಾಗಿ ದಾವಣಗೆರೆ ವಿಶ್ವವಿದ್ಯಾಲಯ (70 ಅಂಕ), ಉತ್ತಮ ಒಡಂಬಡಿಕೆ ಮತ್ತು ಶಿಷ್ಯವೃತ್ತಿ ಹಾಗೂ ಪಠ್ಯಕ್ರಮದ ಪರಿಷ್ಕರಣೆಗಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (68 ಅಂಕ).

ಶೈಕ್ಷಣಿಕ ಸೇವೆ ಜೊತೆಗೆ ಸಾಮಾಜಿಕ ಜವಾಬ್ದಾರಿ, ಸಿಬ್ಬಂದಿ ಸುಧಾರಣೆ, ಸ್ಥಳೀಯ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ಹಾಗೂ ವಿದ್ಯಾರ್ಥಿ ಸ್ನೇಹಿ ಆವರಣಕ್ಕೆ ವೇದಿಕೆಯಾಗಿರುವ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಅರ್ಹ ಗರಿ ಸಂದಿರುವುದಕ್ಕೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ವಿತ್ತಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Foods To Boost Memory: ಮಕ್ಕಳಲ್ಲಿ ನೆನೆಪಿನ ಶಕ್ತಿ ಹೆಚ್ಚಿಸಲು ಈ ಆಹಾರಗಳನ್ನು ತಪ್ಪದೇ ನೀಡಿ!

ವಿಶ್ವವಿದ್ಯಾಲಯದ ಈ ಸಾಧನೆಗೆ ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ಎಲ್ಲ ನಿಕಾಯದ ಡೀನರು, ಎಲ್ಲ ವಿಭಾಗಗಳ ಮತ್ತು ಘಟಕಗಳ ಮುಖ್ಯಸ್ಥರು, ಸಂಯೋಜಕರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News