ವಿಜಯಪುರ ಕೈಗಾರಿಕೆಯಲ್ಲಿ ಅವಘಡ: 7 ಕಾರ್ಮಿಕರ ಸಾವು, ಮೃತರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ

`ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ  ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ. 

Written by - Yashaswini V | Last Updated : Dec 5, 2023, 03:26 PM IST
  • ವಿಜಯಪುರ ಕೈಗಾರಿಕೆಯಲ್ಲಿ ಅವಘಡ
  • ಮಧ್ಯರಾತ್ರಿವರೆಗೂ ಖುದ್ದು ಕಾರ್ಯಾಚರಣೆ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ
  • ಘಟನೆ ಬಗ್ಗೆ ಸಿಎಂಗೆ ನಿರಂತರ ಮಾಹಿತಿ ಕೊಟ್ಟ ಸಚಿವರು
ವಿಜಯಪುರ ಕೈಗಾರಿಕೆಯಲ್ಲಿ ಅವಘಡ: 7 ಕಾರ್ಮಿಕರ ಸಾವು, ಮೃತರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ title=

ವಿಜಯಪುರ: ಇಲ್ಲಿನ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಫುಡ್ಸ್ ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಸಂಭವಿಸಿರುವ ದುರಂತದಲ್ಲಿ ಮೃತರಾಗಿರುವ ಏಳು ಕಾರ್ಮಿಕರಿಗೂ ತಲಾ 7 ಲಕ್ಷ ರೂ. ಪರಿಹಾರ ಕೊಡಲಾಗುವುದು. ಜೊತೆಗೆ ಗಾಯಾಳುಗಳಿಗೆ ಚಿಕಿತ್ಸೆಗೆಂದು ತಲಾ 50 ಸಾವಿರ ರೂ. ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಭಾರೀ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಕಿಶೋರ್ ಜೈನ್ ಅವರ ಒಡೆತನದ ಈ ಉದ್ಯಮ ಘಟಕದಲ್ಲಿ ಮಿತಿ ಮೀರಿ ತುಂಬಿದ್ದ ಟ್ಯಾಂಕರುಗಳ ಪಿಲ್ಲರ್ ಗಳು ಸೋಮವಾರ ಕುಸಿದು, ಅದರಡಿ ಕಾರ್ಮಿಕರು ಸಿಕ್ಕಿ ಹಾಕಿಕೊಂಡಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಸಚಿವರು ಬೆಳಗಾವಿಯಿಂದ ರಾತ್ರಿಯೇ ಇಲ್ಲಿಗೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಮತ್ತು ಚಿಕಿತ್ಸೆ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ, ಮಧ್ಯರಾತ್ರಿಯವರೆಗೂ ಅವರು ಸ್ಥಳದಲ್ಲೇ ಇದ್ದು ಸೂಕ್ತ ನಿರ್ದೇಶನ ನೀಡಿದರು.

ಮಂಗಳವಾರ ಬೆಳಿಗ್ಗೆ ಕೂಡ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ವೀಕ್ಷಿಸಿದರು. ಎನ್ ಡಿಆರ್ ಎಫ್ ಸೇರಿದಂತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಎಲ್ಲರನ್ನೂ ಸಚಿವರು ಅಭಿನಂದಿಸಿದರು.

ಇದನ್ನೂ ಓದಿ- ರೈತರ ಬೇಡಿಕೆಗಾಗಿ ಕೊಡಿಹಳ್ಳಿ ಚಂದ್ರಶೇಖರ್ ನೇತೃತ್ವ ಪ್ರತಿಭಟನೆ

ಮಂಗಳವಾರ ಮಧ್ಯಾಹ್ನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ಸ್ಥಿತಿಗತಿಯನ್ನು ವಿಚಾರಿಸಿದ ಸಚಿವ ಎಂ.ಬಿ. ಪಾಟೀಲ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, `ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ  ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದರು.

ಮೃತರ ಕುಟುಂಬಗಳಿಗೆ ಕೈಗಾರಿಕೆಯ ಮಾಲೀಕರ ವತಿಯಿಂದ ತಲಾ 5 ಲಕ್ಷ ರೂ. ಮತ್ತು ಸರಕಾರದ ಕಡೆಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈ ದುರಂತ ಸಂಭವಿಸಿರುವುದು ನಿಜಕ್ಕೂ ನೋವಿನ ವಿಷಯವಾಗಿದೆ. ಜೊತೆಗೆ, ರಾಜ್ಯದಲ್ಲಿನ ಕೈಗಾರಿಕೆಗಳಲ್ಲಿ ಯಾವುದೇ ಅನಾಹುತಕ್ಕೆ ಆಸ್ಪದ ಇರದಂತೆ ನೋಡಿಕೊಳ್ಳಲು ಹೆಚ್ಚಿನ ಸುರಕ್ಷಾ ಕ್ರಮಗಳಿಗೆ ಆದ್ಯತೆ ಕೊಡಲಾಗುವುದು. ಜತೆಗೆ, ಈ ಘಟನೆಗೆ ಕಾರಣರಾದ ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ- ಖಾಸಗಿ ಆಸ್ಪತ್ರೆ ವೈದ್ಯರು ಕೆಪಿಎಂಇ ಕಡ್ಡಾಯ ನೋಂದಣಿಗೆ ಸೂಚನೆ

ಮೃತರೆಲ್ಲರೂ ಬಡ ಕುಟುಂಬಗಳಿಗೆ ಸೇರಿದವರು. ವಿಪತ್ತು ಪರಿಹಾರ ಕಾರ್ಯಾಚರಣೆ ತಂಡಗಳು ಮೃತ ದೇಹಗಳನ್ನು ಹೊರತೆಗೆದಿದ್ದು, ಹೆಚ್ಚಿನ ಶೋಧ ಮುಂದುವರಿದಿದೆ. ಈ ದುರಂತ ಸಂಭವಿಸಬಾರದಿತ್ತು ಎಂದು ಅವರು ಕಂಬನಿ ಮಿಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಪಾಲನ್, ಜಿಲ್ಲಾ ಪೊಲೀಸ್ ವರಿಷ್ಠ ಹೃಷಿಕೇಶ ಸೋನಾವಣೆ, ಜಿಪಂ ಸಿಇಒ ರಾಹುಲ್ ಶಿಂದೆ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಡಿವೈಎಸ್ಸಿ ಬಸವರಾಜ ಯಲಿಗಾರ ಮುಂತಾದವರು ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News