ಬೆಂಗಳೂರು : ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟನೆ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರಕಾರವು ಒಂದೆಡೆ ಎಸ್‍ಟಿ ಅಭಿವೃದ್ಧಿ ನಿಗಮ, ಎಸ್‍ಇಪಿ ಟಿಎಸ್‍ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ.ಮತ್ತೊಂದು ಕಡೆ ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಹೋರಾಟ ಮಾಡುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಇದನ್ನೂ ಓದಿ : ಪುಟ್ಟ ಕಂದ ಆರ್ಯನ್ ಗೆ ಆಸರೆಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಸಿದ್ದರಾಮಯ್ಯನವರು ದಲಿತರಿಗೆ ಮೀಸಲಿಟ್ಟ 12 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.ತದನಂತರ ಕೂಡಾ ಸುಮಾರು ಅಷ್ಟೇ ಮೊತ್ತ ವರ್ಗಾಯಿಸಿದ್ದಾರೆ.ಒಟ್ಟಾಗಿ 24,500 ಕೋಟಿ ಮೊತ್ತವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ದೆಹಲಿಯಿಂದ ಬಂದ ಪತ್ರಕ್ಕೆ ಸರಕಾರ ಉತ್ತರ ಕೊಡಬೇಕಿದೆ ಎಂದು ವಿವರಿಸಿದ್ದಾರೆ.
ಅಲ್ಲದೆ ಈ ಹಣವನ್ನು ದಲಿತರಿಗೇ ಬಳಸಿದ್ದೇವೆ; ದುರುಪಯೋಗ ಆಗಿಲ್ಲ ಎಂದಿದ್ದಾರೆ. ರಾಜ್ಯ ಸರಕಾರವು ದಲಿತರಿಗೆ ಅನ್ಯಾಯ ಮಾಡಿದೆ. ಇದು ಅಕ್ಷಮ್ಯ ಅಪರಾಧ. ಬಿಜೆಪಿ, ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ಮುಂದುವರೆಸಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯನವರು ಅಹಿಂದ ನಾಯಕರು ಎಂದು ಹೇಳಿಕೊಂಡು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಾರೆ. ದಲಿತರ ಉದ್ಧಾರಕರು ಎಂದು ಹೇಳಿ, ತಾವೇ ದಲಿತರ ಉದ್ಧಾರ ಮಾಡಿರುವುದಾಗಿ ತಮ್ಮ ಬಗ್ಗೆ ತಾವು ಕೊಚ್ಚಿಕೊಳ್ಳುತ್ತಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.