ಮೂಲಭೂತ ಸೌಕರ್ಯಕ್ಕೆ ಆಗ್ರಹ: ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು

Villagers Protest : ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು ಒದಗಿಸಿ ನಂತರ ಸೌಲಭ್ಯಗಳನ್ನು ಸಂಬಂಧಿಸಿದ ಅಧಿಕಾರಿಗಳು ವಾಪಾಸ್ ಪಡೆದುಕೊಂಡಿದ್ದಾರೆ.

Written by - Zee Kannada News Desk | Last Updated : Jun 5, 2023, 04:04 PM IST
  • ಮೂಲಭೂತ ಸೌಕರ್ಯಗಳನ್ನು ನೀಡಲು ಮೀನಾಮೇಷ
  • ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
  • ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು
ಮೂಲಭೂತ ಸೌಕರ್ಯಕ್ಕೆ ಆಗ್ರಹ: ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು title=

ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿ ಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ‌ನಡೆದಿದೆ. 

ಇದನ್ನೂ ಓದಿ: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ

ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು ಒದಗಿಸಿ ನಂತರ ಸೌಲಭ್ಯಗಳನ್ನು ಸಂಬಂಧಿಸಿದ ಅಧಿಕಾರಿಗಳು ವಾಪಾಸ್ ಪಡೆದುಕೊಂಡಿದ್ದಾರೆ.

ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಈ ಹಿಂದೆ ಸಾಕಷ್ಟು ಬಾರಿ  ಇಲ್ಲಿನ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೇ ಚುನಾವಣಾ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮಾತ್ರ‌ ಸೌಕರ್ಯಗಳನ್ನು ಒದಗಿಸಲಾಗಿತ್ತು,  ಇದೀಗ ಸೌಕರ್ಯಗಳು ಸ್ಥಗಿತಗೊಂಡ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮರಳಿ ಸೌಕರ್ಯಗಳನ್ನು ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ವಿದ್ಯುತ್ ದುಂದುವೆಚ್ಚ ಮಾಡುವಂತೆ ಜನರಿಗೆ ಬಿಜೆಪಿ ಕುಮ್ಮಕ್ಕು!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News