ಬೆಂಗಳೂರು : ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿ ಸಾವನ್ನಪ್ಪಿದ್ದ ಮೂವರು ರೋಗಿಗಳ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ವಿಮ್ಸ್‌ನಲ್ಲಿ ವಿದ್ಯುತ್ ಕೈಕೊಟ್ಟು, ಜನರೇಟರ್ ಕೆಲಸ ಮಾಡದೆ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಮೂವರು ರೋಗಿಗಳು ಮೃತಪಟ್ಟಿದ್ದರು. ಹಲವಾರು ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಘಟನೆಯಲ್ಲಿ ಹಾವು ಕಡಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಚೆಟ್ಟೆಮ್ಮ, ಕಿಡ್ನಿ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೌಲಾ ಹುಸೇನ್ ಹಾಗೂ ಚೇಳು ಕಡಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಳ್ಳಾರಿ ತಾಲೂಕಿನ ಜೋಳದರಾಶಿಯ ಮನೋಜ್ ಎಂಬವರು ಸಾವನ್ನಪ್ಪಿದ್ದರು.
ಇದನ್ನೂ ಓದಿ: ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗಿನ ಹಲವು ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ
ಈ ಘಟನೆ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇತ್ತ ವಿಧಾನಸಭೆ ಅಧಿವೇಶನದಲ್ಲಿವೂ ರೋಗಿಗಳ ಸಾವಿನ ಕುರಿತು ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ಆರೋಪಗಳ ಮಳೆ ಸುರಿದಿದ್ದವು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿದ್ದರು. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಇನ್ನು ವಿಮ್ಸ್‌ನಲ್ಲಿ ವಿದ್ಯುತ್ ಅವಘಡದಿಂದ ಸಾವು ಸಂಭವಿಸಿಲ್ಲ ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಸ್ಪಷ್ಟನೆ ನೀಡಿದ್ದಾರೆ. ಶಿಕ್ಷಣ ಸಚಿವ ಸುಧಾಕರ್ ಹಾಗೂ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ರೋಗಿಗಳ ಸಾವಿನ ಬಗ್ಗೆ ವರದಿ ನೀಡುವಂತೆ ವೈದ್ಯಕೀಯ ಸೂಚನೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.