Viral News: ಜರ್ಮನಿ ಮೂಲದ ಯುವತಿಯೊಂದಿಗೆ ಹಸಮಣೆಯೇರಿದ ಕುಂದಾಪುರ ಯುವಕ!

ಜರ್ಮನಿ ಮೂಲದ ಯುವತಿಯೋರ್ವರು ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಜೊತೆ ಹಿಂದೂ ಸಂಪ್ರದಾಯದಂತೆ ಮದುವೆಯಾದ ಘಟನೆ ಕುಂದಾಪುರದಲ್ಲಿ ನಡೆಯಿತು. 

Written by - Savita M B | Last Updated : Jan 4, 2024, 11:23 AM IST
  • ಜರ್ಮನಿ ಮೂಲದ ಯುವತಿ ಕುಂದಾಪುರ ಯುವಕನೊಂದಿಗೆ ಹಸೆಮಣೆಯೇರಿದ್ದಾರೆ
  • ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು.
Viral News: ಜರ್ಮನಿ ಮೂಲದ ಯುವತಿಯೊಂದಿಗೆ ಹಸಮಣೆಯೇರಿದ ಕುಂದಾಪುರ ಯುವಕ!  title=

ಕುಂದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಸೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು. 

ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ಮುನಿಸ್ತರ್ ಯುನಿಕಬ್ ದಂಪತಿಯ ಪುತ್ರಿ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ. 

ಇದನ್ನೂ ಓದಿ-ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು

ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು. 

ಅದರಂತೆ ಇವರ ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು-ಮಿತ್ರರು, ಹಿತೈಷಿಗಳು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.

ಇದನ್ನೂ ಓದಿ-ಇದು ನಿಮ್ಮ ಜೀ ಕನ್ನಡ ನ್ಯೂಸ್ ಬಿಗ್ ಇಂಪ್ಯಾಕ್ಟ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News