ವಿಜಯಪುರ: ಮಾತೃ ಹೃದಯಕ್ಕೆ ಈ ಶ್ವಾನದ ದೃಶ್ಯವೇ ಸಾಕ್ಷಿಯಾಗಿದೆ. ಮಳೆ ನೀರಿನಿಂದ ಮರಿಯನ್ನು ರಕ್ಷಿಸಿರುವ ನಾಯಿಯ ವಿಡಿಯೋ ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗಿದೆ. ವಿಜಯಪುರದ ಆಲಮೇಲ ತಾಲೂಕಿನ ತಾರಾಪುರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಪ್ರವಾಹ ಪರಿಸ್ಥಿತಿಯಿಂದ ಇಲ್ಲಿನ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಪ್ರವಾಹ(Flood) ಪರಿಸ್ಥಿತಿ ನಿರ್ಮಾಣವಾಗಿದ್ದು, ತಾರಾಪುರದಲ್ಲಿ ನೀರಿನ ಹೊಡೆತಕ್ಕೆ ಸಿಲುಕಿಕೊಂಡು ಜೀವ ರಕ್ಷಣೆಗಾಗಿ ಪರದಾಡುತ್ತಿದ್ದ ನಾಯಿ ಮರಿಯನ್ನು ಅದರ ತಾಯಿ ರಕ್ಷಣೆ ಮಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋವನ್ನು ಸುದ್ದಿಸಂಸ್ಥೆ ANI ಹಂಚಿಕೊಂಡಿದೆ.
#WATCH Karnataka: A female dog rescues her puppy and shifts it to a safer location in flood-affected Tarapur village of Vijayapura district. Several parts of the state are reeling under flood, triggered due to rainfall. (17.10.2020) pic.twitter.com/0BgWCl4kDq
— ANI (@ANI) October 18, 2020
ಇದನ್ನೂ ಓದಿ: ನಿಮಗೂ LPG ಸಬ್ಸಿಡಿ ಸಿಗುತ್ತಿಲ್ಲವೇ ? ಇಂದೇ ಈ ಕೆಲಸ ಮಾಡಿ, ತಕ್ಷಣ ನಿಮ್ಮ ಖಾತೆಗೆ ಹಣ ಬರುತ್ತದೆ
ಅಪಾರ ಪ್ರಮಾಣದ ನೀರು ನುಗ್ಗಿದ ಪರಿಣಾಮ ಮರಿನಾಯಿಗಳಿಗೆ ಅಪಾಯ ಬಂದೆರಗಿತ್ತು. ಈ ವೇಳೆ ಹೇಗಾದರೂ ಮಾಡಿ ತನ್ನ ಮರಿಗಳನ್ನು ರಕ್ಷಿಸಬೇಕು ಎಂದು ತಾಯಿ ಶ್ವಾನ(Dog)ವು ಪ್ರವಾಹದ ಪರಿಸ್ಥಿತಿಯನ್ನೂ ಲೆಕ್ಕಿಸದೆ ಕಾರ್ಯಾಚರಣೆ ನಡೆಸಿದೆ. ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ ನಾಯಿಮರಿಯನ್ನು ತನ್ನ ಬಾಯಲ್ಲಿ ಗಟ್ಟಿಯಾಗಿ ಕಚ್ಚಿ ಹಿಡಿದುಕೊಂಡು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ.
ಮರಿಯನ್ನು ತನ್ನ ಬಾಯಿಯಲ್ಲಿ ಹಿಡಿದು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿರುವ ತಾಯಿ ನಾಯಿಯ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಮಾತೃಹೃದಯಿ ಶ್ವಾನದ ಕರುಳಬಳ್ಳಿಯ ಪ್ರೀತಿಗೆ ಮಾರುಹೋಗಿದ್ದಾರೆ. ಅನೇಕರು ತಾಯಿ ಶ್ವಾನದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಾಣಿಗಳಲ್ಲಿರುವ ಕರುಳಬಳ್ಳಿಯ ಪ್ರೀತಿ ಕಂಡು ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: Online Game ಆಡುವವರೇ ಎಚ್ಚರ..! ನೀವು ಗೇಮ್ ನಲ್ಲಿ ಮುಳುಗಿರುವಾಗ ಹ್ಯಾಕರ್ ಗಳು ಖಾಲಿ ಮಾಡಿಬಿಡಬಹುದು ನಿಮ್ಮ ಖಾತೆ
ವಿಜಯಪುರ(Vijayapura) ಜಿಲ್ಲೆಯಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜನರು ಮನೆ-ಮಠ ಕಳೆದುಕೊಂಡು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅನ್ನಾಹಾರಕ್ಕಾಗಿ ತೀವ್ರ ಪರದಾಟ ಎದುರಾಗಿದೆ. ಸೆ.12ರವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.