Viral Video: ಚುನಾವಣಾ ಪ್ರಚಾರದಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ ಸಚಿವ ಎಂಟಿಬಿ ನಾಗರಾಜ್!

ಪಕ್ಷದ ಕಾರ್ಯಕರ್ತರೊಂದಿಗೆ ಸಚಿವ ಎಂ.ಟಿ.ಬಿ ನಾಗರಾಜ್ ನಾಗಿನ್ ಹಾಡಿಗೆ ಸ್ಟೆಪ್ ಹಾಕಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  

Last Updated : Apr 10, 2019, 06:44 PM IST
Viral Video: ಚುನಾವಣಾ ಪ್ರಚಾರದಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ ಸಚಿವ ಎಂಟಿಬಿ ನಾಗರಾಜ್! title=
Photo Courtesy: ANI

ಹೊಸಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು ಮತದಾರನನ್ನು ಓಲೈಸಲು ಸಾಕಷ್ಟು ಸರ್ಕಸ್ ಮಾಡುತ್ತಿವೆ. ಇಂಥದ್ದೇ ಒಂದು ಘಟನೆ ಹೊಸಕೋಟೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಪರ ಹೊಸಕೋಟೆಯ ಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಪ್ರಚಾರದಲ್ಲಿ ಕರ್ನಾಟಕ ವಸತಿ ಸಚಿವ ಎಂ.ಟಿ.ಬಿ ನಾಗರಾಜ್ ಪಾಲ್ಗೊಂಡಿದ್ದರು. ಇದೇ ವೇಳೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವ ಎಂ.ಟಿ.ಬಿ ನಾಗರಾಜ್ ಸಹಾ ನಾಗಿನ್ ಹಾಡಿಗೆ ಸ್ಟೆಪ್ ಹಾಕಿದ್ದು ವಿಶೇಷವಾಗಿತ್ತು. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  
 

Trending News