ಸದ್ಯದಲ್ಲೇ ಸಚಿವರಾಗುವ ವಿಶ್ವಾಸ ವ್ಯಕ್ತಪಡಿಸಿದ ವಿಶ್ವನಾಥ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪಲ್ಲ, ಅವರು ಹೇಳಿದ ಹಾಗೆ ನಡೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.

Last Updated : Jan 13, 2020, 11:02 AM IST
ಸದ್ಯದಲ್ಲೇ ಸಚಿವರಾಗುವ ವಿಶ್ವಾಸ ವ್ಯಕ್ತಪಡಿಸಿದ ವಿಶ್ವನಾಥ್ title=

ಬೆಂಗಳೂರು: ಬಿಜೆಪಿ ಸರ್ಕಾರ ಬರಲು ತಮ್ಮ ರಾಜಕೀಯ ಭವಿಷ್ಯವನ್ನೇ ಸವಾಲಾಗಿ ತೆಗೆದುಕೊಂಡು ಪ್ರಮುಖ ಪಾತ್ರ ನಿರ್ವಹಿಸಿದ್ದ ಹಿರಿಯ ನಾಯಕ ಹೆಚ್. ವಿಶ್ವನಾಥ್(H Vishwanath) ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಅದಾಗ್ಯೂ, ಸದ್ಯದಲ್ಲೇ ತಾವು ಸಚಿವರಾಗುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಹೌದು, ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ(BS Yediyurappa)  ಕೊಟ್ಟ ಮಾತಿಗೆ ತಪ್ಪುವುದಿಲ್ಲ. ಅವರು ನಾಲಿಗೆ ಮೇಲೆ ನಡೆಯುವ ನಾಯಕ ಎಂದು ಹೊಗಳಿದ ವಿಶ್ವನಾಥ್, ನನಗೆ ಯಡಿಯೂರಪ್ಪ ಅವರ ಮಾತಿನ ಮೇಲೆ ನಂಬಿಕೆ ಇದೆ. ಮಂತ್ರಿಗಿರಿ ಸಿಗುತ್ತೋ, ಇಲ್ಲವೋ ಎಂಬ ಬಗ್ಗೆ ಯಾವುದೇ ರೀತಿಯ ಅನುಮಾನವಾಗಲಿ ಅಥವಾ ಭಯವಾಗಲಿ ಇಲ್ಲ.  ನಾನು ಸದ್ಯದಲ್ಲಿಯೇ ಸಚಿವನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ತ್ಯಾಗವಿಲ್ಲದೆ ಬಿಜೆಪಿ ಸರ್ಕಾರ ಬರಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದ ವಿಶ್ವನಾಥ್,  ಉಪಚುನಾವಣೆಯಲ್ಲಿ ಗೆದ್ದಿರಲಿ ಅಥವಾ ಸೋತಿರಲಿ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆಯುತ್ತಾರೆ. ಜೂನ್ ತಿಂಗಳಲ್ಲಿ ವಿಧಾನಪರಿಷತ್ತಿನಲ್ಲಿ 12 ಸ್ಥಾನಗಳು ಖಾಲಿಯಾಗಲಿದ್ದು, ಎಂಟಿಬಿ ನಾಗರಾಜ್ ಅವರ ಜೊತೆಗೆ ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ವ್ಯಕ್ತಪಡಿಸಿದರು.

Trending News