ವಯನಾಡು ಮಳೆ ದುರಂತ: ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ 

ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟಿರುವ ಕನ್ನಡಿಗರಿಗೆ ತಲಾ ಐದು ಲಕ್ಷ ಪರಿಹಾರ ಧನವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Written by - Manjunath N | Last Updated : Jul 31, 2024, 05:01 PM IST
  • ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ.
  • ಇದೊಂದು ಅತ್ಯಂತ ಘೋರ ದುರಂತ,
  • ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು.
ವಯನಾಡು ಮಳೆ ದುರಂತ: ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ  title=

ಬೆಂಗಳೂರು: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟಿರುವ ಕನ್ನಡಿಗರಿಗೆ ತಲಾ ಐದು ಲಕ್ಷ ಪರಿಹಾರ ಧನವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತಾಗಿ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಅವರು "ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನೂ ಮುಂದುವರೆದು "ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ, ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. ಈಗಾಗಲೇ ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನಲ್ಲಿರುವ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿವೆ.ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News