ನಾವು ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ, ನಮಗೆ ಯಾವುದೇ ಆಕ್ಷೇಪವಿಲ್ಲ.- ಬಿ.ಎಸ್.ಯಡಿಯೂರಪ್ಪ

ವಿಶ್ವಾಸ ಮತ ಚಲಾಯಿಸುವುದಾಗಿ ಹೇಳಿದ್ದ ಸಿಎಂ ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ ಎಂದು ಹೇಳಿದರು.

Last Updated : Jul 13, 2019, 06:05 PM IST
ನಾವು ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ, ನಮಗೆ ಯಾವುದೇ ಆಕ್ಷೇಪವಿಲ್ಲ.- ಬಿ.ಎಸ್.ಯಡಿಯೂರಪ್ಪ title=
photo:ANI

ಬೆಂಗಳೂರು: ವಿಶ್ವಾಸ ಮತ ಚಲಾಯಿಸುವುದಾಗಿ ಹೇಳಿದ್ದ ಸಿಎಂ ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ ಎಂದು ಹೇಳಿದರು.

“ಅವಿಶ್ವಾಸ ನಿರ್ಣಯಕ್ಕೆ ನಮಗೆ ಯಾವುದೇ ಆಕ್ಷೇಪವಿಲ್ಲ. ನಾವು ಸೋಮವಾರದವರೆಗೆ ಕಾಯುತ್ತೇವೆ. ಸೋಮವಾರ, ನಾವು ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧರಿದ್ದೇವೆ.ಆಡಳಿತಾರೂಡ ಸಮ್ಮಿಶ್ರ ಸರ್ಕಾರವು  ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಂಡಿದೆ. ಆದ್ದರಿಂದ, ವಿಶ್ವಾಸ ಮತ ಚಲಾಯಿಸುವುದು ಅರ್ಥಹೀನ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಏತನ್ಮಧ್ಯೆ, ಸ್ಪೀಕರ್ ರಮೇಶ್ ಕುಮಾರ್ ತಮ್ಮ ರಾಜೀನಾಮೆಯನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿ ಇನ್ನೂ ಐದು ಬಂಡಾಯ ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ. ಶಾಸಕರು ಅನರ್ಹತೆಯ ಬೆದರಿಕೆಯ ಮೇಲೆ ಸರ್ಕಾರವನ್ನು ಬೆಂಬಲಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 16 ರವರೆಗೆ 10 ಬಂಡಾಯ ಕಾಂಗ್ರೆಸ್-ಜೆಡಿ (ಎಸ್) ಸಮ್ಮಿಶ್ರ ಶಾಸಕರ ಅನರ್ಹತೆ ಅಥವಾ ರಾಜೀನಾಮೆ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸುಪ್ರೀಂ ಕೋರ್ಟ್ ಸ್ಪೀಕರ್  ಅವರಿಗೆ ನಿರ್ದೇಶನ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. 

 

Trending News