ಬೆಂಗಳೂರು: ಶಿಕ್ಷಕರು ಮತ್ತು ನಾಡಿನ ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ. ಹೀಗಾಗಿ ಅವರೆಲ್ಲಾ ನಮ್ಮ ಪರವಾಗಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನವರಿಯಿಂದ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಕಾರ್ಯಕ್ರಮ ಆರಂಭವಾಗಲಿದೆ. ನಾವು ವಿದ್ಯಾವಂತ ಯುವಕ ಯುವತಿಯರಿಗೆ 24 ತಿಂಗಳ ಕಾಲ ಯುವನಿಧಿ ಕೊಡುವ ಜತೆಗೆ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದರು.
ಇದನ್ನೂ ಓದಿ- ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ: ಹೆಚ್ಡಿಕೆ
ಟಿಕೆಟ್ ಆಕಾಂಕ್ಷಿಗಳು ಶಿಕ್ಷಕ ಸದಸ್ಯರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿಸಿಕೊಂಡು ನಮಗೆ ತಿಳಿಸಿ. ನಾಡಿನ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದಕ್ಕಾಗಿ ಪಕ್ಷ ಮತ್ತು ಸರ್ಕಾರ ಶ್ರಮಿಸಲಿದೆ. ಇದನ್ನು ಮತದಾರರಿಗೆ ಸರಿಯಾಗಿ ಅರ್ಥ ಮಾಡಿಸಿ ಚುನಾವಣೆಯಲ್ಲಿ ಗೆದ್ದು ಬನ್ನಿ ಎಂದು ಹಾರೈಸಿದರು.
ಟಿಕೆಟ್ ಆಕಾಂಕ್ಷಿಗಳು ಮತ್ತು ಎಲ್ಲಾ ಶಾಸಕರು ಮತ್ತು ಜಿಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಘೋಷಿಸುತ್ತೇವೆ. ಟಿಕೆಟ್ ಯಾರಿಗೇ ಸಿಕ್ಕರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದರು.
ಇದನ್ನೂ ಓದಿ- ಸರಕಾರ ಜನರನ್ನು ಯಾಮಾರಿಸುತ್ತಿದೆ, ಡಬಲ್ ಗೇಮ್ ಆಡುತ್ತಿದೆ -ನಿಖಿಲ್ ಕುಮಾರಸ್ವಾಮಿ ಆಕ್ರೋಶ
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸಚಿವ ರಾಮಲಿಂಗಾರೆಡ್ಡಿ ಅವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.