ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ತೀರ್ಮಾನ ಮಾಡಿದ್ದೇವೆ: ಸಿದ್ದರಾಮಯ್ಯ

ಮೆಡಿಕಲ್ , ಲ್ಯಾಪ್‌ಟಾಪ್, ಟ್ರಾನ್ಸವರ್ ವಿಷಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅಭಿವೃದ್ಧಿ ಕುಂಟಿತವಾಗಿದೆ, ಆರ್ಥಿಕತೆ ಅಧೋಗತಿಗೆ ಹೋಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Last Updated : Sep 24, 2020, 04:00 PM IST
  • ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ನಾವು ತೀರ್ಮಾನ ಮಾಡಿದ್ದೇವೆ- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
  • ಅಭಿವೃದ್ಧಿ ಕುಂಟಿತವಾಗಿದೆ, ಆರ್ಥಿಕತೆ ಅಧೋಗತಿಗೆ ಹೋಗುತ್ತಿದೆ- ಸಿದ್ದರಾಮಯ್ಯ ಕಿಡಿ
  • ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರೈತರಿಗೆ ಮಾರಕವಾಗುವ ಭೂ ಸುಧಾರಣಾ ಕಾಯಿದೆ ಹಾಗೂ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದಿದೆ- ಸಿದ್ದರಾಮಯ್ಯ ಆಕ್ರೋಶ
ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ತೀರ್ಮಾನ ಮಾಡಿದ್ದೇವೆ: ಸಿದ್ದರಾಮಯ್ಯ title=

ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ವಿರುದ್ಧ ಅವಿಶ್ವಾಸ ಮಂಡಿಸಲು ನಾವು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಿತು. ಸಭೆಯಲ್ಲಿ ಸದನಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಚರ್ಚೆ ಮಾಡಲಾಯಿತು. ಸರ್ಕಾರದ ವಿರುದ್ಧ ಧ್ವನಿಯೆತ್ತುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು. 

ಮುಂದಿನ ಮೂರು ವರ್ಷವೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ: ಸಚಿವ ವಿ. ಸೋಮಣ್ಣ

ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ  ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಡಿಯೂರಪ್ಪ ಮಗ, ಮೊಮ್ಮಗ, ಅಳಿಯ ಎಲ್ಲರು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಈ ಹಿನ್ನಲೆಯಲ್ಲಿ ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ನಾವು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಮೆಡಿಕಲ್, ಲ್ಯಾಪ್‌ಟಾಪ್, ಟ್ರಾನ್ಸವರ್ ವಿಷಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅಭಿವೃದ್ಧಿ ಕುಂಟಿತವಾಗಿದೆ, ಆರ್ಥಿಕತೆ ಅಧೋಗತಿಗೆ ಹೋಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ದೇಶದಲ್ಲಿ ಕೊರೊನಾ ಸಂಖ್ಯೆಯಲ್ಲಿ ಹೆಚ್ಚಳ: 7 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಸಭೆ

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರೈತರಿಗೆ (Farmers) ಮಾರಕವಾಗುವ ಭೂ ಸುಧಾರಣಾ ಕಾಯಿದೆ ಹಾಗೂ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದಿದೆ. ಅದೇ ರೀತಿ ಕಾರ್ಮಿಕ ವಿರೋಧಿ ಕಾನೂನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಒಂದು ವರ್ಷ ನಾಲ್ಕು ತಿಂಗಳಲ್ಲಿ ಒಂದು ಲಕ್ಷ ಕೋಟಿ ಸಾಲ ಮಾಡಿದ್ದಾರೆ.‌ ತಮ್ಮ ಮಂತ್ರಿ ಮಂಡಲ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ನಾವು ತೀರ್ಮಾನ ಮಾಡಿದ್ದೇವೆ. ಈಗಾಗಲೇ ಸ್ಪೀಕರ್ ಗೆ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
 

Trending News