ನಮಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ, ನಮಗೂ ಆತ್ಮಸಾಕ್ಷಿ ಮತಗಳು ಬರುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು. 

Written by - Yashaswini V | Last Updated : Feb 15, 2024, 02:25 PM IST
  • ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ಬೆಂಬಲ ನೀಡಿದ್ದಾರೆ.
  • ರಾಜ್ಯಸಭೆಗೆ ನಮ್ಮ ಪಕ್ಷದಿಂದ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.
  • ಇವರು ಆಯ್ಕೆಯಾಗಿ ರಾಜ್ಯಸಭೆಯಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಲಿದ್ದಾರೆ ಎಂಬ ವಿಶ್ವಾಸವಿದೆ- ಡಿಸಿಎಂ ಡಿಕೆ ಶಿವಕುಮಾರ್
ನಮಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ, ನಮಗೂ ಆತ್ಮಸಾಕ್ಷಿ ಮತಗಳು ಬರುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು title=

ಬೆಂಗಳೂರು: "ನಮಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ" ಎಂದು ಕೆ‌ಪಿ‌ಸಿ‌ಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು. 

ಈ ಕುರಿತಂತೆ ಮಾಧ್ಯಮ ಮಿತ್ರರ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, "ನಮಗೂ ಎಲ್ಲಾ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ. ಜೆಡಿಎಸ್ ವಿಫಲವಾಗಿರುವ ಕಾರಣದಿಂದ ಅವರು ಬಿಜೆಪಿ ಜತೆ ನೆಂಟಸ್ಥನ ಮಾಡುತ್ತಿದ್ದಾರೆ. ಆ ಪಕ್ಷಗಳಿಂದ ನಮಗೂ ಆತ್ಮಸಾಕ್ಷಿಯ ಮತಗಳು ಬರುವ ವಿಶ್ವಾಸವಿದೆ. ಬಿಜೆಪಿ ಮತ್ತು ಜೆಡಿಎಸ್ ನವರು ಸದಾ ಕುದುರೆ ವ್ಯಾಪಾರ ಮಾಡುತ್ತಾರೆ. ಅವರು ಅದಕ್ಕೆ ಹೆಸರುವಾಸಿ. ಫೆ. 27 ರಂದು ಎಲ್ಲವೂ ತಿಳಿಯಲಿದೆ. ಅವರು ಬಿಜೆಪಿಗೆ ಬಹಳ ಹತ್ತಿರವಾಗಿರುವಂತೆ ಬಿಂಬಿಸುತ್ತಿದ್ದಾರೆ. ಬಿಜೆಪಿಯ ಎಷ್ಟು ಮತಗಳು ಅವರಿಗೆ ಸಿಗಲಿದೆ ಎಂಬುದನ್ನು ಕಾದುನೋಡಿ" ಎಂದರು. 

ಇದನ್ನೂ ಓದಿ- ವಾಹನಗಳಿಗೆ ನೋಂದಣಿ ಫಲಕ ಅಳವಡಿಸಲು ನಿಗದಿ ಮಾಡಿದ್ದ ಅವಧಿ ಮತ್ತೆ ವಿಸ್ತರಿಸಲಾಗುವುದು : ರಾಮಲಿಂಗಾ ರೆಡ್ಡಿ ಹೇಳಿಕೆ

ಆ ಪಕ್ಷಗಳಿಂದ ನಿಮಗೆ ಎಷ್ಟು ಆತ್ಮಸಾಕ್ಷಿ ಮತಗಳು ಸಿಗಬಹುದು ಎಂದು ಮಾಧ್ಯಮ ಮಿತ್ರರು ಕೇಳಿದಾಗ, “ಮತದಾನದ ನಂತರ ತಿಳಿಸುತ್ತೇವೆ” ಎಂದಷ್ಟೇ ಪ್ರತಿಕ್ರಿಯಿಸಿದರು. 

ಮೈತ್ರಿಯಿಂದ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತಿ ಡಿ.ಕೆ. ಶಿವಕುಮಾರ್, "ಅವರು ಅವರ ಪ್ರಯತ್ನ ಮಾಡಲಿ. ನಾವು ನಮ್ಮ ಒಗ್ಗಟ್ಟಿನ ರಾಜಕಾರಣ ಮಾಡುತ್ತೇವೆ" ಎಂದು ತಿಳಿಸಿದರು.

ನಮ್ಮ ಅಭ್ಯರ್ಥಿಗಳು ರಾಜ್ಯಸಭೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಲಿದ್ದಾರೆ:
ರಾಜ್ಯಸಭೆ ಅಭ್ಯರ್ಥಿಗಳ ವಿಚಾರವಾಗಿ ಕೇಳಿದಾಗ, "ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ಬೆಂಬಲ ನೀಡಿದ್ದಾರೆ. ರಾಜ್ಯಸಭೆಗೆ ನಮ್ಮ ಪಕ್ಷದಿಂದ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಇವರು ಆಯ್ಕೆಯಾಗಿ ರಾಜ್ಯಸಭೆಯಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಲಿದ್ದಾರೆ ಎಂಬ ವಿಶ್ವಾಸವಿದೆ" ಎಂದರು.

ಅಜಯ್ ಮಾಕೇನ್ ಅವರ ಆಯ್ಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಈ ಹಿಂದೆ ಬಿಜೆಪಿ, ಜೆಡಿಎಸ್ ನವರು ಕರೆದುಕೊಂಡು ಬಂದು ನಿಲ್ಲಿಸಿದ್ದರಲ್ಲ, ಅವರನ್ನು ಕೇಳಿ. ಅಜಯ್ ಮಾಕೇನ್ ಅವರ ಕುಟುಂಬ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಅನೇಕ ತ್ಯಾಗ ಮಾಡಿದೆ. ವಿದ್ಯಾರ್ಥಿ ನಾಯಕನಿಂದ ದೆಹಲಿವರೆಗೂ ಪಕ್ಷದ ಸಂಘಟನೆ ಮಾಡಿರುವ ಪಕ್ಷದ ಆಧಾರಸ್ತಂಭ ಇವರು. ಹೀಗಾಗಿ ಅವರನ್ನು ನಾವು ಬಹಳ ಸಂತೋಷದಿಂದ ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು. 

ಇದನ್ನೂ ಓದಿ- ಚಿತ್ರೀಕರಣಕ್ಕೆ ಮಕ್ಕಳ ಬಳಕೆಗೆ ಷರತ್ತು : ಕಾರ್ಮಿಕ ಇಲಾಖೆಯಿಂದ ಫಿಲಂ ಚೇಂಬರ್​ಗೆ ನೋಟಿಸ್

ಪ್ರಜಾಪ್ರಭುತ್ವ ರಕ್ಷಣೆಗೆ ಸುಪ್ರೀಂ ಮಹತ್ವದ ನಿರ್ಧಾರ:
ಚುನಾವಣಾ ಬಾಂಡ್ ಗಳನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿರುವ ಬಗ್ಗೆ ಕೇಳಿದಾಗ, "ದೇಶದ ಇತಿಹಾಸದಲ್ಲೇ ಇದೊಂದು ಮಹತ್ವದ ನಿರ್ಧಾರ. ಅವರ ಈ ಧೈರ್ಯವಾದ ನಿರ್ಧಾರಕ್ಕೆ ನಾನು ಅಭಿನಂದಿಸುತ್ತೇನೆ. ದೇಶದ ಪ್ರಜಾಪ್ರಭುತ್ವ ಉಳಿಸಲು ಇಂತಹ ಮಹತ್ವದ ನಿರ್ಧಾರಗಳು ಬೇಕು" ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News