ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

ಗದಗ: ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಶ್ರೀಗಳು ಸಮಾಜದ ಬಗ್ಗೆ ಕಳಕಳಿಯಿಂದ ಮಾತನಾಡಿದ್ದಾರೆ. ಅವರ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾನು ನಿರಂತರವಾಗಿ ವಚನಾನಂದ ಶ್ರೀಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.

Written by - Prashobh Devanahalli | Last Updated : Apr 12, 2024, 03:17 PM IST
    • ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿರುವ ವಚನಾನಂದ ಶ್ರೀ
    • ಪೀಠಾಧ್ಯಕ್ಷ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಸಲಾಗುವುದು
    • ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿಕೆ
ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ title=
File Photo

ಗದಗ: ಬಿಜೆಪಿಯಿಂದ ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿರುವ ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಸಲಾಗುವುದು. ಸ್ಬಾಮೀಜಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ  ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ನಟಿ ಮಾನ್ವಿತಾ ಕಾಮತ್’ಗೆ ಕೂಡಿ ಬಂತು ಕಂಕಣಭಾಗ್ಯ: ಸಿನಿರಂಗದ ಈ ಖ್ಯಾತ ವ್ಯಕ್ತಿಯನ್ನೇ ಮದ್ವೆಯಾಗಲಿದ್ದಾರೆ ಟಗರು ಪುಟ್ಟಿ

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಶ್ರೀಗಳು ಸಮಾಜದ ಬಗ್ಗೆ ಕಳಕಳಿಯಿಂದ ಮಾತನಾಡಿದ್ದಾರೆ. ಅವರ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾನು ನಿರಂತರವಾಗಿ ವಚನಾನಂದ ಶ್ರೀಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.

ಇದೇ ವೇಳೆ ಶಿರಹಟ್ಟಿ ಫಕೀರೇಶ್ವರ ಮಠದ  ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ತದಿಂದ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಆ ಬಗ್ಗೆ ಮಾಹಿತಿ ಇಲ್ಲ ಎಂದರು.

ನನಗೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ. ನನಗೆ ಹಳ್ಳಿಗಳ ಸಂಪರ್ಕ ಇದೆ. ಜನರ ಪ್ರೀತಿ ವಿಶ್ವಾಸ. ನನಗೂ ಪ್ರೀತಿ ಇದೆ. ಯಾವುದೇ ಸಮಯ ವ್ಯರ್ಥ ಮಾಡದೇ ಪ್ರಚಾರ ಮಾಡುತ್ತಿದ್ದೇನೆ. ಪ್ರತಿಯೊಂದು ಗ್ರಾಮಪಂಚಾಯಿತಿ ಮಟ್ಟಕ್ಕೆ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಹಳ್ಳಿಹಳ್ಳಿಗಳಲ್ಲಿ ಪ್ರಚಾರವಾಗುತ್ತಿದೆ ಎಂದರು.

ಇದನ್ನೂ ಓದಿ: MI vs RCB ಪಂದ್ಯದ ಟಾಸ್ ವೇಳೆ ಕನ್ನಡಿಗ ರೇಫರೀಯೇ ಬೆಂಗಳೂರು ತಂಡದ ಸೋಲಿಗೆ ಕಾರಣರಾದ್ರಾ?

ಹಾವೇರಿ-ಗದಗ ಕ್ಷೇತ್ರದಲ್ಲಿ ಮೋದಿ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಬಗ್ಗೆ ಕೇಂದ್ರ ಪ್ರಚಾರ ಸಮಿತಿಯವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News