ಜಾತಿ ನಿಂದನೆ ಆರೋಪ: ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮವೆಂದ ಗೃಹ ಸಚಿವ ಡಾ.ಜಿಪರಮೇಶ್ವರ್

ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ನಾಣ್ಣುಡಿ ಇದೆ ಅಂತಾ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಿಲ್ಲಿಸಿದರೆ ಒಳ್ಳೆಯದು, ಚುಚ್ಚು ಮಾತುಗಳನ್ನಾಡುವಾಗ ವಿವೇಚನೆ ಇರಬೇಕು ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

Written by - RACHAPPA SUTTUR | Edited by - Puttaraj K Alur | Last Updated : Aug 16, 2023, 04:01 PM IST
  • ನಟ ಉಪೇಂದ್ರ ಮತ್ತು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ವಿರುದ್ಧ ಜಾತಿ ನಿಂದನೆ ಆರೋಪ
  • ನಾಣ್ಣುಡಿ ಇದೆ ಎಂದು ಕೀಳಾಗಿ ಮಾತನಾಡುವುದು ಸರಿಯಲ್ಲ, ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ
  • ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಕಾನೂ‌ನು ಕ್ರಮವೆಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಜಾತಿ ನಿಂದನೆ ಆರೋಪ: ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮವೆಂದ ಗೃಹ ಸಚಿವ ಡಾ.ಜಿಪರಮೇಶ್ವರ್ title=
ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ನಟ ಉಪೇಂದ್ರ ಮತ್ತು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ವಿರುದ್ಧ ಜಾತಿ ನಿಂದನೆ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯರ ಜೊತೆಗೆ ಚರ್ಚಿಸಿ ಕಾನೂ‌ನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯವರ ವಿರುದ್ದ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾಣ್ನುಡಿ ಇದೆ ಅಂತಾ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ. ಆ ತರ ಹೇಳಿಕೆಗಳನ್ನು ನಾನು ಸಹಿಸುವುದಿಲ್ಲ. ಸಚಿವರೇ ಆಗಲಿ ಯಾರೇ ಆಗಲಿ ಕಾನೂ‌ನು ಪ್ರಕಾರ ಕ್ರಮ ತೆಗೆದುಕೊಳ್ತೇವೆ ಎಂದು ತಿಳಿಸಿದರು.

ಯಾರೂ ಸಹ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಹೀಗೆ ಮಾತನಾಡೋರು ಅರ್ಥ ಮಾಡಿಕೊಳ್ಳಬೇಕು. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಯಾರೇ ಆದರೂ ನಿಲ್ಲಿಸಬೇಕು. ಇದನ್ನು ನಿಲ್ಲಿಸಿದರೆ ಒಳ್ಳೆಯದು. ಇದನ್ನು ನಾನು ಸಹ ಸಹಿಸುವುದಿಲ್ಲ. ಹೀಗೆ ಮಾತಾಡೋದು ಒಂದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಭಾರಿ ಮಳೆ, ಗುಡ್ಡ ಕುಸಿತ

ನಟ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಕೇಸ್ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಸಚಿವ ಮಲ್ಲಿಕಾರ್ಜುನ ಏನ್ ಮಾತಾಡಿದ್ದಾರೆ ಅಂತಾ ಗೊತ್ತಿಲ್ಲ. ಆದರೆ ಅದರ ಬಗ್ಗೆ ಪೇಪರ್‍ನಲ್ಲಿ ಓದಿದ್ದೇನೆ. ರಾಜಾಜಿನಗರ ಕೇಸ್ ವಿಧಾನಸೌಧಕ್ಕೆ ವರ್ಗವಾಗಿದೆ. ಸಾರ್ವಜನಿಕ ಜೀವನದಲ್ಲಿ ಇದ್ದು, ಬೇರೆ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ. ಹೀಗೆ ಮಾತಾಡಿದ್ರೆ ಅ ಸಮುದಾಯಕ್ಕೆ ನೋವಾಗಲ್ಲವಾ? ಎರಡೂ ದೂರಿನ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈ ಬಗ್ಗೆ ಕಾನೂ‌ನಿನ ರೀತಿ ಕ್ರಮ ತೆಗೆದುಕೊಳ್ತೇವೆ ಎಂದು  ಹೇಳಿದರು.

ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ!

ಸರ್ಕಾರದ ವಿರುದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ವಿರೋಧ ಪಕ್ಷದಲ್ಲಿದ್ದಾರೆ. ಅವರು ಟೀಕೆ-ಟಿಪ್ಪಣಿ ಮಾಡೋದಕ್ಕೆ ನಮಗೇನು ಅಭ್ಯಂತರ ಇಲ್ಲ. ಅವರಿಗೆ ಟೀಕೆ ಮಾಡೋ ಹಕ್ಕಿದೆ. ನಮ್ಮನ್ನು ತಿದ್ದೋ ಹಕ್ಕಿದೆ. ಆದರೆ ಇಲ್ಲಸಲ್ಲದ ಆರೋಪ ಮಾಡೋದು, ದಾಖಲೆ ಇಲ್ಲದೆ ಮಾತಾಡೋದು ಸರಿಯಲ್ಲ. ಅವರು ಎರಡು ಬಾರಿ ಸಿಎಂ ಆದವರು. ಅವರು ಮಾತಾಡಿದ್ರೆ ಜನರು ಗಮನಿಸುತ್ತಾರೆ. ಹೌದಪ್ಪ, ಇವರು ಹೇಳೋದ್ರಲ್ಲಿ ಸತ್ಯ ಇರುತ್ತೆ ಅಂತಾನೂ ಜನರು ನಂಬ್ತಾರೆ. ಆದರೆ ಅವರು ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡದೇ ಹೋದ್ರೆ ಗೌರವ ಸಿಗುವುದಿಲ್ಲ ಎಂದು ಹೇಳಿದರು.

ಇಷ್ಟು ಭ್ರಷ್ಟಾಚಾರದ ಸರ್ಕಾರ ನೋಡಿಲ್ಲವೆಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ನಾವು ಜನರಿಗೆ ಮಾತು ಕೊಟ್ಟಿದ್ದೇವೆ. ಒಳ್ಳೆಯ ಆಡಳಿತ ಕೊಡ್ತೀವಿ ಅಂತಾ. ಸಿಎಂ ಮತ್ತು ಸಚಿವರು ಅದರಂತೆ ಕೆಲಸ‌ ಮಾಡ್ತಿದ್ದಾರೆ. ಕೇವಲ ಆಪಾದನೆ ಮಾಡೋಕೆ ಎಂದು ಆರೋಪ ಮಾಡೋದು ಬೇಡ. ಸುಮ್ಮನೆ ಆರೋಪ ಮಾಡೋದು ವಿಪಕ್ಷಗಳಿಗೆ ಸರಿ ಅನ್ನಿಸೋದಿಲ್ಲವೆಂದು ಕುಮಾರಸ್ವಾಮಿ ವಿರುದ್ಧ ಪರಮೇಶ್ವರ್ ಕಿಡಿಕಾರಿದರು.

ಇದನ್ನೂ ಓದಿ: ರಾಜಕೀಯವಾಗಿ ಯುದ್ಧ ಮಾಡಿದ್ದಾಯಿತು

ಬಿಜೆಪಿ ಶಾಸಕರು ಬರಬಹುದು!

ಬಿಜೆಪಿಯಿಂದ ಕಾಂಗ್ರೆಸ್‍ಗೆ ಶಾಸಕರು ಬರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಶಾಸಕರು ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಅಂತಾ ಹೇಳಿ ಶಾಸಕರು ಬರಬಹುದು. ಬಿಜೆಪಿಯಿಂದ ಬರುವ ಶಾಸಕರನ್ನು ಸೇರ್ಪಡೆ ಮಾಡಿಕೊಳ್ತೀವಿ. ಈಗಾಗಲೇ ಅಧ್ಯಕ್ಷರು ಈ ಬಗ್ಗೆ ಹೇಳಿದ್ದಾರೆ. ಪರಿಶೀಲನೆ ಮಾಡಿ ತೆಗೆದುಕೊಳ್ತೀವಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಐಡಿಯಾಲಜಿ ನಂಬಿ, ಕಾಂಗ್ರೆಸ್ ಲೀಡರ್‍ಶಿಫ್ ಮೇಲೆ ನಂಬಿಕೆ‌ ಇಟ್ಟು ಪಕ್ಷಕ್ಕೆ ಬಂದರೆ ಬರಬಹುದು ಎಂದರು.

ಹಿಂದೆ ಪಕ್ಷ ಬಿಟ್ಟು ಹೋದವರು ಬರಬಹುದು. ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೇಂಚ್ ಸಿಗುವುದಿಲ್ಲ. ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ತೀವಿ ಅಂದ್ರೆ ಮಾಡಿಕೊಂಡು ಬರಬಹುದು. ಫಸ್ಟ್ ಬೆಂಚ್ ಸಿಗುವುಲ್ಲ ಅವರಿಗೆ, ಆದ್ರೆ ಅವರಿಗೆ ಕ್ಲಾಸ್ ರೂಂಗೆ ಬರಲು ಅವಕಾಶವಿದೆ. ಅವರಿಗೆ ಮತ್ತೆ ಫಸ್ಟ್ ಬೆಂಚ್‍ ಸಿಗಬೇಕಾದ್ರೆ ತುಂಬಾ ದಿನ ಆಗುತ್ತೆ ಅಷ್ಟೇ. ನನ್ನ ಜೊತೆ ಶಾಸಕರು ಚರ್ಚೆ ಮಾಡಿರೋ ಬಗ್ಗೆ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಈ ಬಾರಿ ಕರ್ನಾಟಕದ ಜನತೆ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅವರ ವಿಶ್ವಾಸಕ್ಕೆ ತಕ್ಕಂತೆ ಭರವಸೆ ಈಡೇರಿಸಿದ್ದೇವೆ ಎಂದರು.

ನಾವು ನುಡಿದಂತೆ ನಡೆದಿದ್ದೇವೆ. ಅದರಂತೆ ನಡೆದುಕೊಳ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲುಬೇಕು. ಇದಕ್ಕೆ ಏನು ಬೇಕೋ ಅದನ್ನು ಮಾಡ್ತೇವೆ. ಜನರಿಗೆ ಭರವಸೆ ಈಡೇರಿಸೋದು ಒಂದು ಕಡೆಯಾದ್ರೆ ರಾಜಕೀಯ ಮಾಡೋದು ಮತ್ತೊಂದು ಕಡೆ. ಬಿಜೆಪಿ ಅವರು ಕಳೆದ ಬಾರಿ 25 ಸ್ಥಾನ ಪಡೆದಿದ್ದರು. ಈ ಬಾರಿ ನಾವು ಇಷ್ಟು ಸ್ಥಾನ ಪಡೆಯಬೇಕು ಅಂತಾ ಇದ್ದೇವೆ. ಅದರೆ ಜನರು ತೀರ್ಮಾನ ಮಾಡ್ತಾರೆ. ಜನರ ಬಳಿ ಹೋಗ್ತೇವೆ. ನನ್ನ ಬಳಿ ಶಾಸಕರು ಚರ್ಚೆ ಮಾಡಿದ್ದಾರೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಪರಮೇಶ್ವರ್ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News