Rain Alert: ರಾಜ್ಯದಲ್ಲಿ ಮುಂದಿನ 5 ದಿನ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Weather Update 04-07-2023: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈಗ ಮುಂಗಾರು ಚುರುಕಾಗಿದೆ. ಹೀಗಾಗಿ ಮುಂದಿನ ಐದು ದಿನಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

Written by - Bhavishya Shetty | Last Updated : Jul 4, 2023, 07:59 AM IST
    • ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈಗ ಮುಂಗಾರು ಚುರುಕಾಗಿದೆ
    • ಮುಂದಿನ 4-5 ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ
    • ಕರಾವಳಿಯಲ್ಲಿ ಆರೆಂಜ್ ಅಲರ್ಟ್, ಐದನೇ ದಿನಕ್ಕೆ ಹಳದಿ ಅಲರ್ಟ್ ಇರುತ್ತದೆ
Rain Alert: ರಾಜ್ಯದಲ್ಲಿ ಮುಂದಿನ 5 ದಿನ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ title=
Karnataka Rain

Weather Update 04-07-2023: ಬೆಂಗಳೂರು: ಕರ್ನಾಟಕದ ಕೆಲ ಭಾಗಗಳಲ್ಲಿ ಕಳೆದ ಕೆಲ ದಿನಗಳ ಹಿಂದೆಯೇ ಮುಂಗಾರು ಪ್ರವೇಶವಾಗಿದ್ದರೂ ಸಹ, ಇನ್ನೂ ಹಲವು ಜಿಲ್ಲೆಗಳು ಮಳೆಯ ಕೊರತೆಯಿಂದ ನೀರಿನ ಅಭಾವ ಎದುರಿಸಿತ್ತು. ಆದರೆ ಇದೀಗ ವರುಣ ಕೃಪೆ ತೋರಿದ್ದು,  ಮುಂದಿನ 4-5 ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಇದನ್ನೂ ಓದಿ: 30 ವರ್ಷಗಳ ಬಳಿಕ ಈ ರಾಶಿಯವರ ಜಾತಕದಲ್ಲಿ ರಾಜಯೋಗ: ದುಡ್ಡಿನ ಸುರಿಮಳೆ- ಇನ್ಮುಂದೆ ಸ್ವರ್ಗ ಸುಖ ಪಕ್ಕಾ!

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈಗ ಮುಂಗಾರು ಚುರುಕಾಗಿದೆ. ಹೀಗಾಗಿ ಮುಂದಿನ ಐದು ದಿನಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

ಕರಾವಳಿಯಲ್ಲಿ ಆರೆಂಜ್ ಅಲರ್ಟ್ (12-20 ಸೆಂ.ಮೀ ಮಳೆ), ಐದನೇ ದಿನಕ್ಕೆ ಹಳದಿ ಅಲರ್ಟ್ (7-11 ಸೆಂ.ಮೀ) ಇರುತ್ತದೆ. ದಕ್ಷಿಣ-ಆಂತರಿಕ ಕರ್ನಾಟಕವು ಬೆಂಗಳೂರು ನಗರ ಸೇರಿದಂತೆ 17 ಜಿಲ್ಲೆಗಳನ್ನು ಒಳಗೊಂಡಿದೆ. ಬೆಂಗಳೂರು ನಗರವು ನಿರ್ದಿಷ್ಟವಾಗಿ ಯಾವುದೇ ಎಚ್ಚರಿಕೆಯನ್ನು ಎದುರಿಸುತ್ತಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ.

ರಜೆ ಘೋಷಣೆ: 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ತಾಲೂಕು ಉಸ್ತುವಾರಿ ಕಂದಾಯ ಅಧಿಕಾರಿಗಳಾದ ತಹಶೀಲ್ದಾರ್‌ ಗಳಿಗೆ ಅಧಿಕಾರ ನೀಡಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವಭಾವಿ ಕ್ರಮಗಳ ಅಗತ್ಯವನ್ನು ಒತ್ತಿಹೇಳಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಈ ರಾಶಿಗಳ ಮೇಲಿರಲಿದೆ ಶಿವನ ಶ್ರೀರಕ್ಷೆ: ರಾಜವೈಭೋಗ ಸಿದ್ಧಿ-ಸಂಪತ್ತಿನಿಂದ ತಿಜೋರಿ ತುಂಬುವುದು!

ಶಿಕ್ಷಣ ಅಧಿಕಾರಿಗಳು ಸಮಗ್ರ ವರದಿಯನ್ನು ಸಿದ್ಧಪಡಿಸಿ ತಹಶೀಲ್ದಾರ್‌’ಗೆ ಸಲ್ಲಿಸಬೇಕು.  ಆಯಾ ಬ್ಲಾಕ್‌ ಗಳ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಕಾಲೇಜು ಪ್ರಾಂಶುಪಾಲರು ಪ್ರತಿ ದಿನ ಬೆಳಗ್ಗೆ 6 ಗಂಟೆಗೆ ಬ್ಲಾಕ್ ಶಿಕ್ಷಣಾಧಿಕಾರಿಗಳೊಂದಿಗೆ (ಬಿಇಒ) ವಿಡಿಯೋ ಸಂವಾದದಲ್ಲಿ ತೊಡಗುವಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಈ ಚರ್ಚೆಗಳ ಸಮಯದಲ್ಲಿ, ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಗಳನ್ನು ಮೌಲ್ಯಮಾಪನ ಮಾಡುತ್ತಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3COfPCC 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News