ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

IMD Rainfall Alert: ಕರಾವಳಿಯಲ್ಲಿ ಬೀಪೋರ್​ಜೊಯ್ ಎಂಬ ಹೆಸರಿನ​​ ಚಂಡಮಾರುತದ ಅಬ್ಬರ ಜೋರಾಗಿದ್ದು ಮುಂದಿನ ಮೂರು ದಿನಗಳವರೆಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

Written by - Yashaswini V | Last Updated : Jun 7, 2023, 08:48 AM IST
  • ಹವಾಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ವಾಯುಭಾರತ ಕುಸಿತ
  • ಮೋಚಾ ಸೈಕ್ಲೋನ್ ನಂತರ ಬಿಪರ್‌ಜಾಯ್ ಚಂಡಮಾರುತ ಸೃಷ್ಟಿ
  • ಬಿಪರ್‌ಜಾಯ್ ಎಪೆಕ್ಟ್ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ
ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ 3 ದಿನ ಭಾರೀ ಮಳೆ  title=
Weather Update

Weather Update today: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಅರಬ್ಬಿ ಸಮುದ್ರದಲ್ಲಿ  ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ಕರ್ನಾಟದ ಕರಾವಳಿ ಸೇರಿದಂತೆ ಕೇರಳ , ಮಹಾರಾಷ್ಟ್ರ  ಗುಜರಾತ್​ನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಈ ಹಿಂದೆ ಜೂನ್ 3, 4ನೇ ತಾರೀಖು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ತಿಳಿಸಿದ್ದ ಹವಾಮಾನ ಇಲಾಖೆ, ಚಂಡಮಾರುತ ಹಿನ್ನೆಲೆಯಲ್ಲಿ ಕೇರಳ ಪ್ರವೇಶಿಸ ಬೇಕಿದ್ದ ಮುಂಗಾರು 4 ದಿನ ತಡವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. 

ಹವಾಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ  ವಾಯುಭಾರತ ಕುಸಿತದಿಂದಾಗಿ ಮೋಚಾ ಸೈಕ್ಲೋನ್ ನಂತರ ಬಿಪರ್‌ಜಾಯ್ ಚಂಡಮಾರುತ ಸೃಷ್ಟಿಯಾಗಿದೆ. ಬಿಪರ್‌ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಜೂನ್ 10ರವರೆಗೆ ಭಾರೀ ಮಳೆಯಾಗುವ ಸಂಭವವಿದೆ. ಈ ಸೈಕ್ಲೋನ್‌ ವೇಗ ಆರಂಭದಲ್ಲಿ ಪ್ರತಿ ಗಂಟೆಗೆ 45-55 ಕಿಲೋ ಮೀಟರ್ ಇರಲಿದ್ದು, ಇದರ ಗರಿಷ್ಠ ವೇಗ 145-155 ಕಿಲೋ ಮೀಟರ್‌ವರೆಗೆ ಬೀಸುವ ಸಾಧ್ಯತೆ ಇದೆ. ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಕರಾವಳಿ ಭಾಗದಲ್ಲಿ ಇಂದಿನಿಂದ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇತ್ತು. ಆದರೆ, ಅರಬ್ಬಿ ಸಮುದ್ರದಲ್ಲಿ  ವಾಯುಭಾರ ಕುಸಿತ ಹಾಗೂ ಕರಾವಳಿಯಲ್ಲಿ ಬೀಪೋರ್​ಜೊಯ್ ಎಂಬ ಹೆಸರಿನ​​ ಚಂಡಮಾರುತದ ಅಬ್ಬರ ಹೆಚ್ಚಾಗಿರುವ ಹಿನ್ನಲೆಯಲ್ಲಿ ಇದು ಮುಂಗಾರು ಪ್ರವೇಶಕ್ಕೂ ಅಡ್ಡಿಯಾಗಬಹುದು. ಹೀಗಾಗಿ ಮುಂಗಾರು ಪ್ರವೇಶ ಮತ್ತಷ್ಟು ವಿಳಂಬವಾಗಲಿದೆ ಎಂದು ಹೇಳಲಾಗಿದೆ. 

ಇದನ್ನೂ ಓದಿ- ಚಿಕ್ಕಮಗಳೂರಿನಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

ಆದಾಗ್ಯೂ, ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಐಎಂಡಿ ಕರ್ನಾಟಕದ ದಕ್ಷಿಣ ಒಳನಾಡ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಲ್ಲದೆ, ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರಿ ಅಲೆ ಎಚ್ಚರಿಕೆಯನ್ನು ನೀಡಲಾಗಿದೆ. 

ಇನ್ನು ಬೀಪೋರ್​ಜೊಯ್ ಚಂಡಮಾರುತದಿಂದ ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮುಂದಿನ ನಾಲ್ಕು ದಿನಗಳವರೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ. 

ಇದನ್ನೂ ಓದಿ- ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್

ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ ಎಚ್ಚರಿಕೆ: 
ಕರಾವಳಿ ಕರ್ನಾಟಕ:

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ

ಉತ್ತರ ಒಳನಾಡು:
ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ

ದಕ್ಷಿಣ ಒಳನಾಡು: 
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News