ಬೆಂಗಳೂರು : ಕೊರೋನಾ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಜೂನ್ 21 ರ ನಂತರವೂ ಬೆಂಗಳೂರಿನಲ್ಲಿ ವೀಕೆಂಟ್ ಕರ್ಪ್ಯೂ, ನೈಟ್ ಕರ್ಪ್ಯೂ ಮುಂದುವರೆಯಲಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಕೊರೋನಾ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 21 ರಿಂದ ಅನ್ ಲಾಕ್ 2.0(Unlock 2.0) ಆರಂಭವಾಗಲಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ : KS Eshwarappa : 'ತಾಲೂಕು-ಜಿಲ್ಲಾ ಪಂಚಾಯತ್' ಚುನಾವಣೆ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಸಚಿವ ಈಶ್ವರಪ್ಪ
ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕೊರೋನಾ 3ನೇ ಅಲೆ(Covid-19 3rd Wave) ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಮುಂದುವರೆಯಲಿದೆ. ಜೊತೆಗೆ 2ನೇ ಅಲೆ ಸಂದರ್ಭದಲ್ಲಿ ಮಾಡಲಾದ ವಾರ್ ರೂಮ್ ಗಳು, ಆಸ್ಪತ್ರೆ, ಆಕ್ಸಿಜನ್, ಟ್ರಯಾಜಿಂಗ್ ಕೇಂದ್ರ, ಕೋವಿಡ್ ಕೇರ್ ಕೇಂದ್ರ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Heavy Rainfall : ಜೂ. 21 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.